ADVERTISEMENT

ಉತ್ತರ ಪ್ರದೇಶ | ಕಾರು ಡಿಕ್ಕಿ ಹೊಡೆದ ಪರಿಣಾಮ ಶಿಶು ಸಾವು, 14 ಮಂದಿಗೆ ಗಾಯ

ಪಿಟಿಐ
Published 26 ಫೆಬ್ರುವರಿ 2023, 10:20 IST
Last Updated 26 ಫೆಬ್ರುವರಿ 2023, 10:20 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಸೀತಾಪುರ(ಉತ್ತರ ಪ್ರದೇಶ): ಇಲ್ಲಿನ ಸಂದಾನ ಹಳ್ಳಿಯಲ್ಲಿ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಶಿಶುವೊಂದು ಸ್ಥಳದಲ್ಲಿಯೇ ಮೃತಪಟ್ಟಿದ್ದು, 14 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶನಿವಾರ ರಾತ್ರಿ ಭಗವತ್ ಕಥಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ನಿಂತಿದ್ದ ಕುಡಿದ ಆಮಲಿನಲ್ಲಿ ವ್ಯಕ್ತಿಯೊಬ್ಬ ಕಾರು ಚಲಾಯಿಸಿದ್ದಾನೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎನ್.ಪಿ.ಸಿಂಗ್ ತಿಳಿಸಿದ್ದಾರೆ.

ಘಟನೆಯಲ್ಲಿ ಎಂಟು ತಿಂಗಳ ಮಗು ಮೃತಪಟ್ಟಿದ್ದು, 14 ಮಂದಿ ಗಾಯಗೊಂಡಿದ್ದಾರೆ. ಕಾರು ಅದೇ ಗ್ರಾಮದ ಅರವಿಂದ್ ಎಂಬುವವರಿಗೆ ಸೇರಿದ್ದಾಗಿದೆ. ಚಾಲಕ ರಜನೀಶ್‌ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.