ADVERTISEMENT

ಉತ್ತರ ಪ್ರದೇಶ | ‘ಜೈಶ್ರೀರಾಂ’ ಎನ್ನದವರ ಮೇಲೆ ಹಲ್ಲೆ

​ಪ್ರಜಾವಾಣಿ ವಾರ್ತೆ
Published 12 ಜುಲೈ 2019, 17:57 IST
Last Updated 12 ಜುಲೈ 2019, 17:57 IST
   

ಲಖನೌ: ಉತ್ತರ ಪ್ರದೇಶದ ಉನ್ನಾವೊ ಪಟ್ಟಣದಲ್ಲಿ ‘ಜೈಶ್ರೀರಾಂ’ ಎಂಬ ಘೋಷಣೆ ಕೂಗಲು ನಿರಾಕರಿಸಿದ ಮದರಸದ ನಾಲ್ವರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಲಾಗಿದೆ.ಹಲ್ಲೆ ನಡೆಸಿದ ಇಬ್ಬರು ಯುವಕರಲ್ಲಿ ಒಬ್ಬರು ಬಿಜೆಪಿ ಯುವಮೋರ್ಚಾದ ಜಿಲ್ಲಾ ಸಮಿತಿಯ ಕಾರ್ಯದರ್ಶಿ. ಈ ಇಬ್ಬರನ್ನೂ ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಹುಡುಗರು ಮೈದಾನದಲ್ಲಿ ಕ್ರಿಕೆಟ್‌ ಆಡುತ್ತಿದ್ದರು. ಆಗ ಅಲ್ಲಿಗೆ ಬಂದ ಯುವಕರು ಅವರ ಬ್ಯಾಟ್‌ ಕಸಿದುಕೊಂಡು ‘ಜೈಶ್ರೀರಾಂ’ ಘೋಷಣೆ ಕೂಗುವಂತೆ ಹೇಳಿದರು. ‘ಘೋಷಣೆ ಕೂಗಲು ನಿರಾಕರಿಸಿದಾಗ ಬ್ಯಾಟ್‌ನಿಂದಲೇ ಹೊಡೆದರು. ನಾವು ಓಡಿದಾಗ ನಮ್ಮತ್ತ ಅವರು ಕಲ್ಲೆಸೆದರು’ ಎಂದು ಹುಡುಗನೊಬ್ಬ ಹೇಳಿದ್ದಾನೆ.

ಯುವಕರನ್ನು ಬಂಧಿಸಿದ ಬಳಿಕ ಪಟ್ಟಣದಲ್ಲಿ ಪ್ರಕ್ಷುಬ್ಧ ಸ್ಥಿತಿ ನಿರ್ಮಾಣ ವಾಗಿತ್ತು. ಬಿಜೆಪಿಯ ನೂರಾರು ಕಾರ್ಯಕರ್ತರು ಕೊತ್ವಾಲಿ ಪೊಲೀಸ್‌ ಠಾಣೆಯನ್ನು ಸುತ್ತುವರಿದು ಯುವಕರಿಬ್ಬರನ್ನೂ ಬಿಡುಗಡೆ ಮಾಡುವಂತೆ ಆಗ್ರಹಿಸಿದರು. ಹಾಗಾಗಿ, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ದೊಡ್ಡ ಸಂಖ್ಯೆಯಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.