ADVERTISEMENT

ಉತ್ತರ ಪ್ರದೇಶ | ಹಳ್ಳಕ್ಕೆ ಬಿದ್ದ ಟ್ರ್ಯಾಕ್ಟರ್ ಟ್ರಾಲಿ: 26 ಯಾತ್ರಾರ್ಥಿಗಳ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 2 ಅಕ್ಟೋಬರ್ 2022, 5:15 IST
Last Updated 2 ಅಕ್ಟೋಬರ್ 2022, 5:15 IST
   

ಕಾನ್ಪುರ: ಉತ್ತರ ಪ್ರದೇಶದ ಘಟಂಪುರ ಸಮೀಪ ಶನಿವಾರ ತಡರಾತ್ರಿ ಟ್ರ್ಯಾಕ್ಟರ್ ಟ್ರಾಲಿ ಹಳ್ಳಕ್ಕೆ ಬಿದ್ದು 26 ಯಾತ್ರಾರ್ಥಿಗಳು ಮೃತಪಟ್ಟಿದ್ದಾರೆ.

ಉನ್ನಾವೊದ ಚಂದ್ರಿಕಾ ದೇವಿ ದೇಗುಲಕ್ಕೆ ತೆರಳಿ ವಾಪಸ್ ಬರುತ್ತಿರುವಾಗ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ಕಳೆದುಕೊಂಡ ಟ್ರ್ಯಾಕ್ಟರ್‌ನ ಟ್ರಾಲಿ ಹಳ್ಳಕ್ಕೆ ಬಿದ್ದು ದುರಂತ ಸಂಭವಿಸಿದೆ.

ಮಗುವಿನ ಮುಡಿ ಒಪ್ಪಿಸಲು ದೇವಸ್ಥಾನಕ್ಕೆ ಹೋಗಿದ್ದ ಜನರು, ವಾಪಸ್ ಬರುತ್ತಿರುವಾಗ ಅಪಘಡ ಸಂಭವಿಸಿದೆ. ಟ್ರ್ಯಾಕ್ಟರ್ ಟ್ರಾಲಿಯಲ್ಲಿ ಸುಮಾರು 50 ಜನರು ಪ್ರಯಾಣಿಸುತ್ತಿದ್ದರಯ ಎನ್ನಲಾಗಿದ್ದು, ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ಮತ್ತು ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ನೆರವಾಗಿದ್ದಾರೆ.

ಪ್ರಧಾನಿ ಮೋದಿ ಸಂತಾಪ
ಉತ್ತರ ಪ್ರದೇಶದಲ್ಲಿ ನಡೆದಿರುವ ಅಪಘಾತದ ಕುರಿತು ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ ಪರಿಹಾರ ಮತ್ತು ಗಾಯಾಳುಗಳಿಗೆ ₹50,000 ನೆರವು ಘೋಷಿಸಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೆರವು ನೀಡಿದ್ದು, ಪರಿಹಾರ ಘೋಷಿಸಿದ್ದಾರೆ. ಜತೆಗೆ ಅಪಘಾತದ ಕುರಿತು ತನಿಖೆಗೆ ಆದೇಶಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.