ADVERTISEMENT

ಉತ್ತರ ಪ್ರದೇಶ: ಸಿಲಿಂಡರ್ ಸ್ಪೋಟ, ಎಂಟು ಮಂದಿ ಸಾವು

ತೀವ್ರವಾಗಿ ಗಾಯಗೊಂಡ ಏಳು ಮಂದಿಗೆ ಲಖನೌ ಆಸ್ಪತ್ರೆಯಲ್ಲಿ ಚಿಕಿತ್ಸೆ

ಪಿಟಿಐ
Published 2 ಜೂನ್ 2021, 5:39 IST
Last Updated 2 ಜೂನ್ 2021, 5:39 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಗೊಂಡಾ (ಉತ್ತರ ಪ್ರದೇಶ): ಅಡುಗೆ ಅನಿಲ ಸಿಲಿಂಡರ್‌ ಸ್ಫೋಟಗೊಂಡಿದ್ದರಿಂದ ಎರಡು ಅಂತಸ್ತಿನ ಕಟ್ಟಡ ಕುಸಿದು ಮೂವರು ಮಕ್ಕಳು ಸೇರಿದಂತೆ ಎಂಟು ಮಂದಿ ಮೃತಪಟ್ಟ ಘಟನೆ ಗೊಂಡಾ ಸಮೀಪದ ಟಿಕ್ರಿ ಹಳ್ಳಿಯಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಘಟನೆಯಲ್ಲಿ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಲಖನೌ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ನೂರುಲ್ ಹಾಸನ್ ಎಂಬವರಿಗೆ ಸೇರಿದ ಎರಡು ಅಂತಸ್ತಿನ ಕಟ್ಟಡದಲ್ಲಿ ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡಿದೆ. ಇದರಿಂದ ಕಟ್ಟಡ ಕುಸಿದಿದೆ. ಸ್ಥಳದಲ್ಲೇ ಎಂಟು ಮಂದಿ ಮೃತಪಟ್ಟು, ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ‘ ಎಂದು ಜಿಲ್ಲಾಧಿಕಾರಿ ಮಾರ್ಕಂಡೇಯ ಶಾಹಿ ತಿಳಿಸಿದ್ದಾರೆ.

ADVERTISEMENT

ಮೃತರನ್ನು ನಿಸಾರ್ ಅಹ್ಮದ್ (35), ರುಬಿನಾ ಬಾನೊ (32), ಶಂಶಾದ್ (28), ಸೈರುನಿಷಾ (35), ಶಹಬಾಜ್ (14), ನೂರಿ ಸಬಾ (12), ಮೆರಾಜ್ (11) ಮತ್ತು ಮೊಹಮ್ಮದ್ ಶೋಯಾಬ್ (2) ಎಂದು ಗುರುತಿಸಲಾಗಿದೆ.

ಘಟನೆಯ ಕಾರಣ ತನಿಖೆ ನಡೆಸಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವಂತೆಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ಗ ಅವರು ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.