ADVERTISEMENT

ಮದುವೆಗೆ ಒಪ್ಪದ ಯುವತಿ: ಬೆಂಕಿ ಹಚ್ಚಿಕೊಂಡು ಸಾವಿಗೆ ಶರಣಾದ ಯುವಕ

​ಪ್ರಜಾವಾಣಿ ವಾರ್ತೆ
Published 14 ಮೇ 2022, 11:32 IST
Last Updated 14 ಮೇ 2022, 11:32 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಗೊಂಡಾ(ಉತ್ತರ ಪ್ರದೇಶ): ಯುವತಿಯೊಬ್ಬಳು ಮದುವೆ ಪ್ರಸ್ತಾಪವನ್ನು ತಿರಸ್ಕರಿಸಿದ ಕಾರಣಕ್ಕೆ ಬೆಂಕಿ ಹಚ್ಚಿಕೊಂಡು 25 ವರ್ಷದ ಯುವಕನೊಬ್ಬ ಮೃತಪಟ್ಟಿದ್ದಾನೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಬೆಂಕಿ ಹಚ್ಚಿಕೊಂಡ ಯುವಕನನ್ನು ‘ಕಿಶೋರ್’ ಎಂದು ಗುರುತಿಸಲಾಗಿದೆ. ಬೆಂಕಿ ನಂದಿಸಲು ಯತ್ನಿಸಿದ ಯುವತಿಯ ಕುಟುಂಬದ ಕೆಲ ಸದಸ್ಯರಿಗೂ ಸುಟ್ಟ ಗಾಯಗಳಾಗಿವೆ.

ಘಟನೆ ಕುರಿತು ಮಾತನಾಡಿರುವ ಯುವತಿಯ ಕುಟುಂಬ ಸದಸ್ಯರು, ‘ಕಿಶೋರ್ ತನ್ನ ಸ್ನೇಹಿತನ ಸಹೋದರಿಗೆ ಮದುವೆಯ ಪ್ರಸ್ತಾಪ ಮಾಡಿದ್ದಾನೆ. ಆದರೆ, ಈ ಪ್ರಸ್ತಾಪವನ್ನು ಯುವತಿ ತಿರಸ್ಕರಿಸಿದ್ದಾಳೆ. ಇದರಿಂದ ಕುಪಿತಗೊಂಡ ಕಿಶೋರ್ ತನ್ನ ಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ’ ಎಂದು ತಿಳಿಸಿದ್ದಾರೆ.

ADVERTISEMENT

ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್‌ ಅಧಿಕಾರಿ ಲಕ್ಷ್ಮೀಕಾಂತ್ ಗೌತಮ್ , ‘ಫರೂಕಾಬಾದ್ ನಿವಾಸಿ ವಿಮಲ್ ಕಿಶೋರ್ ಶುಕ್ರವಾರ ಮೋತಿಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ತನ್ನ ಸ್ನೇಹಿತನ ಮನೆಗೆ ಭೇಟಿ ನೀಡಿದ್ದನು. ಕಿಶೋರ್ ಮತ್ತು ಆತನ ಸ್ನೇಹಿತ ಇಬ್ಬರೂ ಲಖನೌದಲ್ಲಿ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು’ ಎಂದು ಹೇಳಿದ್ದಾರೆ.

‘ಯುವತಿಯ ಸಹೋದರ ಮತ್ತು ಇತರ ಕುಟುಂಬ ಸದಸ್ಯರು ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದರು. ಈ ಸಮಯದಲ್ಲಿ ಅವರಿಗೂ ಸುಟ್ಟ ಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆಯಲ್ಲಿ ಕಿಶೋರ್‌ ಮೃತಪಟ್ಟಿದ್ದಾನೆ’ ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

ಓದಿ...‘ಪಾತಾಳ’ ಹಾಡಿನಲ್ಲಿ ಕೇಂದ್ರ ಸರ್ಕಾರವನ್ನು ಅಣಕಿಸಿದ ಆರೋಪ; ಕಮಲ್ ವಿರುದ್ಧ ದೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.