ಬಾಂಡಾ (ಉತ್ತರಪ್ರದೇಶ): ಆರು ಬಾರಿಯೂ ಹೆಣ್ಣುಮಗುವನ್ನೇ ಹೆತ್ತಳು ಎನ್ನುವ ಕಾರಣಕ್ಕಾಗಿ ಗಂಡನೇ ಹೆಂಡತಿ ಮತ್ತು ಮಕ್ಕಳನ್ನು ಮನೆಯಿಂದ ಹೊರಗೆ ಹಾಕಿದ ಘಟನೆ ಉತ್ತರ ಪ್ರದೇಶದ ಬಾಂಡಾ ಗ್ರಾಮದಲ್ಲಿ ನಡೆದಿದೆ.
‘ಹೆಣ್ಣುಮಕ್ಕಳನ್ನು ಹೆತ್ತಿದ್ದಕ್ಕಾಗಿ ಪತಿ ಲಕ್ಷ್ಮಣ್ ನನ್ನನ್ನು ಸೇರಿದಂತೆ ಆರು ಮಕ್ಕಳನ್ನೂ ಮನೆಯಿಂದ ಹೊರಹಾಕಿದ್ದಾನೆ. ಕೊನೆಯ ಮಗಳಿಗೆ ಎರಡು ವರ್ಷ. ಮೊದಲ ಮಗಳಿಗೆ 14 ವರ್ಷ. ಪತಿಯ ಅಣ್ಣ ಚಾಕುವಿನಿಂದ ನನ್ನ ಮೇಲೆ ಹಲ್ಲೆಯನ್ನೂ ನಡೆಸಿದ್ದಾನೆ’ ಎಂದು ದೂರಿ ಷಹಜಹಾನ್ ಎನ್ನುವ ಮಹಿಳೆ ಸೋಮವಾರ ಪೊಲೀಸರಿಗೆ ದೂರು ಸಲ್ಲಿಸಿದ್ದಾಳೆ.
ಈ ಸಂಬಂಧ ಗಂಡ ಮತ್ತು ಆತನ ಹಿರಿಯ ಸಹೋದರನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ನಾಪತ್ತೆಯಾಗಿರುವ ಸಂಬಂಧಿಕರ ಬಂಧನಕ್ಕೆ ಬಲೆ ಬೀಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.