ADVERTISEMENT

ಬೆಂಬಲಿಗರ ಮನೆಯಲ್ಲಿ ವಾಸ್ತವ್ಯ, ನಲ್ಲಿ ನೀರಿನಲ್ಲಿ ಸ್ನಾನ: ಯುಪಿ ಸಚಿವರ ವಿಡಿಯೊ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 7 ಮೇ 2022, 11:18 IST
Last Updated 7 ಮೇ 2022, 11:18 IST
ನಂದ ಗೋಪಾಲ್ ಗುಪ್ತಾ ಅವರು ಹ್ಯಾಂಡ್ ಪಂಪ್ ಬಳಸಿ ನಲ್ಲಿ ನೀರಿನಲ್ಲಿ ಸ್ನಾನ ಮಾಡುತ್ತಿರುವ ದೃಶ್ಯ –ಟ್ವಿಟರ್ ಚಿತ್ರ
ನಂದ ಗೋಪಾಲ್ ಗುಪ್ತಾ ಅವರು ಹ್ಯಾಂಡ್ ಪಂಪ್ ಬಳಸಿ ನಲ್ಲಿ ನೀರಿನಲ್ಲಿ ಸ್ನಾನ ಮಾಡುತ್ತಿರುವ ದೃಶ್ಯ –ಟ್ವಿಟರ್ ಚಿತ್ರ   

ಲಖನೌ: ಪಕ್ಷದ ಕಾರ್ಯಕರ್ತರೊಬ್ಬರ ಮನೆಯಲ್ಲಿ ರಾತ್ರಿ ವಾಸ್ತವ್ಯ ಹೂಡಿದ್ದ ಉತ್ತರ ಪ್ರದೇಶದ ಸಚಿವರೊಬ್ಬರು ಹ್ಯಾಂಡ್ ಪಂಪ್ ಬಳಸಿ ನಲ್ಲಿ ನೀರಿನಲ್ಲಿ ಸ್ನಾನ ಮಾಡುತ್ತಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕೈಗಾರಿಕಾ ಅಭಿವೃದ್ಧಿ ಸಚಿವ ನಂದ ಗೋಪಾಲ್ ಗುಪ್ತಾ ‘ನಂದಿ’ ಅವರು ಶಹಜಹಾನ್‌ಪುರ ಜಿಲ್ಲೆಯ ಚಕ್ ಕನ್ಹೌ ಗ್ರಾಮಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಚಿತ್ರೀಕರಿಸಿದ ವಿಡಿಯೊಗಳನ್ನು ಟ್ವೀಟ್ ಮಾಡಿದ್ದಾರೆ. ಅವರು ಹ್ಯಾಂಡ್ ಪಂಪ್ ಬಳಸಿ ನಲ್ಲಿ ನೀರಿನಲ್ಲಿ ಸ್ನಾನ ಮಾಡುತ್ತಿರುವ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದೆ.

‘ಇದು ಯೋಗಿ ಸರ್ಕಾರ ಮತ್ತು ಹಿಂದಿನ ಸರ್ಕಾರಗಳ ನಡುವಿನ ವ್ಯತ್ಯಾಸವಾಗಿದೆ. ಯೋಗಿ ಸರ್ಕಾರ ಮತ್ತು ಸಾಮಾನ್ಯ ಜನರ ನಡುವೆ ಯಾವುದೇ ಅಂತರ ಅಥವಾ ಯಾವುದೇ ವ್ಯತ್ಯಾಸವಿಲ್ಲ. ಈ ಸರ್ಕಾರದಲ್ಲಿ ವಿಐಪಿ ಸಂಸ್ಕೃತಿ ಇಲ್ಲ’ ಎಂದು ಮತ್ತೊಂದು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ADVERTISEMENT

ಕಳೆದ ವಾರ ಬರೇಲಿ ಜಿಲ್ಲೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಗುಪ್ತಾ ಅವರು ಭರತೌಲ್ ಗ್ರಾಮದಲ್ಲಿ ರಾತ್ರಿ ತಂಗಿದ್ದರು. ಅಲ್ಲಿಯೂ ಕೈ ಪಂಪ್‌ನಿಂದ ಎಳೆದ ನೀರಿನಲ್ಲಿ ಸ್ನಾನ ಮಾಡಿದ್ದರು.

ಹಲವು ಗ್ರಾಮಗಳಿಗೆ ಭೇಟಿ ನೀಡಿದ್ದ ಗುಪ್ತಾ, ಅಭಿವೃದ್ಧಿ ಕಾರ್ಯಗಳ ಅನುಷ್ಠಾನದ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.