ADVERTISEMENT

ಉತ್ತರಪ್ರದೇಶ | ಬಾಲಕಿಗೆ ನಿರಂತರ ಲೈಂಗಿಕ ಕಿರುಕುಳ: ವೈದ್ಯನ ಬಂಧನ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2025, 2:22 IST
Last Updated 10 ಫೆಬ್ರುವರಿ 2025, 2:22 IST
<div class="paragraphs"><p>ಬಂಧನ</p></div>

ಬಂಧನ

   

(ಪ್ರಾತಿನಿಧಿಕ ಚಿತ್ರ)

ಲಖನೌ: ಬಾಲಕಿಗೆ ನಿರಂತರ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ವೈದ್ಯರೊಬ್ಬರನ್ನು ಬಂಧಿಸಿರುವ ಘಟನೆ ಉತ್ತರ ಪ್ರದೇಶ ಅಮ್ರೋಹಾದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಅಮ್ರೋಹಾದ ಹಳ್ಳಿಯೊಂದರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯನೊಬ್ಬ ಬಾಲಕಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದನು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾನೆ.

ಈ ಘಟನೆ ಸಂಬಂಧ ದೂರು ನೀಡಲು ಅಧಿಕಾರಿಗಳನ್ನು ಸಂಪರ್ಕಿಸಿದಾಗ ಆರೋಪಿಯು ನನಗೆ ಜೀವ ಬೆದರಿಕೆ ಹಾಕಿದ್ದಾನೆ ಎಂದು ಬಾಲಕಿಯ ತಂದೆ ದೂರಿನಲ್ಲಿ ಉಲ್ಲೇಖಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಘಟನೆ ಸಂಬಂಧ ಪೊಲೀಸ್‌ ಠಾಣೆಯ ಬಳಿಯೂ ಪ್ರತಿಭಟನೆ ನಡೆಸಲಾಗಿದ್ದು, ಈ ವೇಳೆ ಸ್ನೇಹಿತರೊಂದಿಗೆ ಬಂದ ಆರೋಪಿಯು ಬಾಲಕಿಗೆ ಬೆದರಿಕೆಯೊಡ್ಡಿದ್ದಾನೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ವೈದ್ಯನನ್ನು ಬಂಧಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.