ಗಾಜಿಯಾಬಾದ್: ಇಲ್ಲಿನ ಪ್ರತಾಪ್ ವಿಹಾರ್ ಪೊಲೀಸ್ ಔಟ್‌ಪೋಸ್ಟ್ ಬಳಿ ಪೊಲೀಸ್ ಕಾನ್‌ಸ್ಟೆಬಲ್‌ವೊಬ್ಬರು ನಿಗೂಢವಾಗಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತರನ್ನು ಬುಲಂದ್‌ಶಹರ್ ಜಿಲ್ಲೆಯ ಸುಮಿತ್ ಕುಮಾರ್ (35) ಎಂದು ಗುರುತಿಸಲಾಗಿದೆ.
ಕುಮಾರ್ ಅವರು ಬಾಗಪತ್ ಜಿಲ್ಲೆಯ ಬರೌತ್‌ಗೆ ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ಆಗಿ ನಿಯೋಜನೆಗೊಂಡಿದ್ದರು. ಅವರಸಾವಿನ ವಿಚಾರ ತಿಳಿಯುತ್ತಿದ್ದಂತೆ, ಸ್ಥಳಕ್ಕೆ ಧಾವಿಸಿ ಶವವನ್ನು ವಶಕ್ಕೆ ಪಡೆಯಲಾಗಿದೆಎಂದು ಪೊಲೀಸರು ಹೇಳಿದ್ದಾರೆ.
ತನಿಖೆಯ ಭಾಗವಾಗಿಬೆರಳಚ್ಚು ತಜ್ಞರ ತಂಡವನ್ನು ಸ್ಥಳಕ್ಕೆ ಕರೆಸಲಾಗಿದೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಸಾವಿಗೆ ನಿಖರ ಕಾರಣ ಏನೆಂಬುದು, ವರದಿ ಬಂದ ನಂತರವಷ್ಟೇ ತಿಳಿಯಲಿದೆ ಎಂದು ಹೆಚ್ಚುವರಿ ಸೂಪರಿಂಟೆಂಡ್ ಆಫ್ ಪೊಲೀಸ್ ನಿಪುಣ್ ಅಗರ್ವಾಲ್ ತಿಳಿಸಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ಮದ್ಯದ ಖಾಲಿ ಬಾಟಲಿ ಹಾಗೂ ಕುರ್ಚಿಯೊಂದು ಸ್ಥಳದಲ್ಲಿ ಪತ್ತೆಯಾಗಿದೆ. ಮುಖದ ಮೇಲೆ ಗಾಯದ ಗುರುತು ಇದೆ ಎನ್ನಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.