ADVERTISEMENT

ಬನ್ನಿ, ಮತ ಚಲಾಯಿಸಿ; ದೇಶವನ್ನು ಎಲ್ಲ ಭಯಗಳಿಂದ ಮುಕ್ತಗೊಳಿಸಿ: ರಾಹುಲ್ ಗಾಂಧಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 10 ಫೆಬ್ರುವರಿ 2022, 7:33 IST
Last Updated 10 ಫೆಬ್ರುವರಿ 2022, 7:33 IST
ರಾಹುಲ್ ಗಾಂಧಿ
ರಾಹುಲ್ ಗಾಂಧಿ   

ನವದೆಹಲಿ: ಜನರು ಮನೆಗಳಿಂದ ಹೊರಬಂದು ಮತ ಚಲಾಯಿಸುವ ಮೂಲಕ ದೇಶವನ್ನು ಎಲ್ಲಾ ಭಯಗಳಿಂದ ಮುಕ್ತಗೊಳಿಸಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರೆ ನೀಡಿದ್ದಾರೆ.

403 ಸದಸ್ಯ ಬಲದ ಉತ್ತರ ಪ್ರದೇಶ ವಿಧಾನಸಭೆಗೆ ಒಟ್ಟು ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಇಂದು (ಫೆ.10) ಮೊದಲ ಹಂತದ ಮತದಾನ ಪ್ರಕ್ರಿಯೆ ಆರಂಭವಾಗಿದೆ.

ಈ ಹಿನ್ನೆಲೆಯಲ್ಲಿ ಮತದಾರರನ್ನುದ್ದೇಶಿಸಿ ಹಿಂದಿಯಲ್ಲಿ ಟ್ವೀಟ್ ಮಾಡಿರುವ ರಾಹುಲ್, 'ದೇಶವನ್ನು ಎಲ್ಲ ಆತಂಕಗಳಿಂದ ಮುಕ್ತಗೊಳಿಸಿ. ಹೊರಗೆ ಬಂದು ಮತ ಚಲಾಯಿಸಿ' ಎಂದು ಮನವಿ ಮಾಡಿದ್ದಾರೆ.

ADVERTISEMENT

ರಾಜ್ಯದ ಪಶ್ಚಿಮ ಭಾಗದ 11 ಜಿಲ್ಲೆಗಳಾದ ಶಾಮ್ಲಿ, ಹಾಪುರ್, ಗೌತಮ ಬುದ್ಧ ನಗರ, ಮುಜಾಫರ್‌ನಗರ, ಮೀರತ್, ಬಾಗ್‌ಪತ್, ಗಾಜಿಯಾಬಾದ್, ಬುಲಂದ್‌ಶಹರ್, ಅಲಿಗಢ, ಮಥುರಾ ಮತ್ತು ಆಗ್ರಾದ ಒಟ್ಟು 58 ವಿಧಾನಸಭೆ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.