ADVERTISEMENT

ಉತ್ತರ ಪ್ರದೇಶ: ರಾಯ್‌ಬರೇಲಿ ಶಾಸಕಿ ಅದಿತಿ ಸಿಂಗ್‌ ಕಾಂಗ್ರೆಸ್‌ಗೆ ರಾಜೀನಾಮೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಜನವರಿ 2022, 12:13 IST
Last Updated 20 ಜನವರಿ 2022, 12:13 IST
   

ರಾಯ್‌ಬರೇಲಿ: ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಗೆ ಸಿದ್ಧತೆಗಳು ಚುರುಕುಗೊಂಡಿರುವಂತೆಯೇ ರಾಯ್‌ಬರೇಲಿ ಕ್ಷೇತ್ರದ ಶಾಸಕಿ ಅದಿತಿ ಸಿಂಗ್‌ ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಸಿಂಗ್‌ ಅವರು ಪಕ್ಷದ ನಾಯಕಿ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಪತ್ರ ಕಳುಹಿಸಿದ್ದಾರೆ.

403 ಸದಸ್ಯ ಬಲದ ಉತ್ತರ ಪ್ರದೇಶ ವಿಧಾನಸಭೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಮಾರ್ಚ್‌ 10ರಂದು ಫಲಿತಾಂಶ ಪ್ರಕಟವಾಗಲಿದೆ.ಏಳು ಹಂತಗಳ ಮತದಾನವು ಕ್ರಮವಾಗಿ ಫೆಬ್ರವರಿ10,14, 20, 23, 27, ಮಾರ್ಚ್‌ 3 ಮತ್ತು 7ರಂದು ನಡೆಯಲಿದೆಎಂದು ಚುನಾವಣಾ ಆಯೋಗ ತಿಳಿಸಿದೆ.

ADVERTISEMENT

ಕಾಂಗ್ರೆಸ್‌ ಪಕ್ಷವು ಕಳೆದ30 ವರ್ಷಗಳಿಂದಲೂ ರಾಜ್ಯದಲ್ಲಿಅಧಿಕಾರದಲ್ಲಿಲ್ಲ ಎಂಬುದು ಗಮನಿಸಬೇಕಾದ ಸಂಗತಿ.

ಕಳೆದ (2017ರ) ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯು312 ಸ್ಥಾನಗಳಲ್ಲಿ ಗೆದ್ದು ಭಾರೀಬಹುಮತ ಸಾಧಿಸಿತ್ತು. ಉಳಿದಂತೆಅಖಿಲೇಶ್‌ ಯಾದವ್‌ ನೇತೃತ್ವದ ಸಮಾಜವಾದಿ ಪಕ್ಷವು47 ಕಡೆ ಹಾಗೂ ಮಾಯಾವತಿ ನೇತೃತ್ವದ ಬಿಎಸ್‌ಪಿ19 ಕ್ಷೇತ್ರಗಳಲ್ಲಿ ಜಯ ಕಂಡಿದ್ದವು. ಕಾಂಗ್ರೆಸ್‌ ಏಳು ಸ್ಥಾನಗಳಲ್ಲಿ ಮಾತ್ರವೇ ಜಯದ ನಗೆ ಬೀರಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.