ADVERTISEMENT

ಅಕ್ಷರ ದೋಷ: ದಲಿತ ವಿದ್ಯಾರ್ಥಿಗೆ ಸಾಯುವಂತೆ ಹೊಡೆದ ಶಿಕ್ಷಕನಿಗೆ ಪೊಲೀಸರ ಹುಡುಕಾಟ

ಐಎಎನ್ಎಸ್
Published 27 ಸೆಪ್ಟೆಂಬರ್ 2022, 13:05 IST
Last Updated 27 ಸೆಪ್ಟೆಂಬರ್ 2022, 13:05 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಲಖನೌ: ಪರೀಕ್ಷೆಯಲ್ಲಿ ಅಕ್ಷರಗಳನ್ನು ತಪ್ಪಾಗಿ ಬರೆದದಲಿತ ವಿದ್ಯಾರ್ಥಿಗೆ ಸಾಯುವಂತೆ ಥಳಿಸಿದ ಶಿಕ್ಷಕನಿಗಾಗಿ ಹುಡುಕಾಟ ನಡೆಸುತ್ತಿದ್ದೇವೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಮೃತ ವಿದ್ಯಾರ್ಥಿನಿಖಿಲ್‌ ದೋಹ್ರೆ, ಔರೈಯ ಜಿಲ್ಲೆಯ ವೈಶೋಲಿ ಗ್ರಾಮದವನಾಗಿದ್ದು, ಅಚಲ್ಡಾ ಪೊಲೀಸ್ ಠಾಣೆ ವ್ಯಾಪ್ತಿಯ ಫಾನ್‌ಫುಡ್ ರಸ್ತೆಯಲ್ಲಿರುವ ಆದರ್ಶ ಇಂಟರ್ ಕಾಲೇಜು ಸಂಸ್ಥೆಯ ಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ.

ವಿದ್ಯಾರ್ಥಿಯು ಪರೀಕ್ಷೆಯ ಒಎಂಆರ್‌ ಶೀಟ್‌ ಭರ್ತಿ ಮಾಡುವಾಗ ತಪ್ಪು ಮಾಡಿದ್ದ ಮತ್ತು ಉತ್ತರ ಪತ್ರಿಕೆಯಲ್ಲಿ 'ಸಮಾಜಿಕ್' (ಸಾಮಾಜಿಕ) ಪದವನ್ನು 'ಸಮಾಜಕ್' ಎಂದು ಬರೆದಿದ್ದ. ಇಷ್ಟಕ್ಕೇ ಕೋಪಗೊಂಡು ಶಿಕ್ಷಕ ಥಳಿಸಿದ್ದಾರೆ ಎನ್ನಲಾಗಿದೆ.

ADVERTISEMENT

ಇದೇ ತಿಂಗಳ ಆರಂಭದಲ್ಲಿ ನಡೆದಪರೀಕ್ಷೆಯಲ್ಲಿ social ಪದವನ್ನು ತಪ್ಪಾಗಿ ಬರೆದಿದ್ದ ಕಾರಣಕ್ಕಾಗಿ ತಮ್ಮ ಮಗನಿಗೆ ಪ್ರೌಢ ಶಾಲೆ ಶಿಕ್ಷಕ ರಾಡ್‌ನಿಂದ ಥಳಿಸಿ, ಕಾಲಿನಿಂದ ಒದ್ದಿದ್ದರು.ಮೂರ್ಚೆ ತಪ್ಪಿ ನೆಲದ ಮೇಲೆ ಬೀಳುವವರೆಗೆ ಹೊಡೆದಿದ್ದರು ಎಂದು ಮೃತ ವಿದ್ಯಾರ್ಥಿಯ ತಂದೆ ದೂರಿನಲ್ಲಿ ಆರೋಪಿಸಿದ್ದಾರೆ.

ಸದ್ಯ ಶಿಕ್ಷಕನನ್ನು ಅಮಾನತುಗೊಳಿಸಲಾಗಿದ್ದು, ಪೊಲೀಸರುಪ್ರಕರಣ ದಾಖಲಿಸಿಕೊಂಡಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ15 ವರ್ಷದ ನಿಖಿಲ್‌ ಆಸ್ಪತ್ರೆಯಲ್ಲಿ ಸೋಮವಾರ ಮೃತಪಟ್ಟಿದ್ದ. ಇದರ ಬೆನ್ನಲ್ಲೇ ಆರೋಪಿ ಶಿಕ್ಷಕ ಪರಾರಿಯಾಗಿದ್ದಾನೆ ಎಂದು ಪೊಲೀಸ್‌ ಅಧಿಕಾರಿ ಮಹೇಂದ್ರ ಪ್ರತಾಪ್‌ ಸಿಂಗ್‌ ತಿಳಿಸಿದ್ದಾರೆ.

ನಿಖಲ್‌ ಸಾವಿನ ಸುದ್ದಿ ಹರಡುತ್ತಿದ್ದಂತೆ ಔರೈಯಾ ಜಿಲ್ಲೆಯಲ್ಲಿ ಜನರು ಬೀದಿಗಿಳಿದು ಪ್ರತಿಭಟಿಸಿದ್ದಾರೆ. ಬಾಲಕನ ಅಂತ್ಯಕ್ರಿಯೆಗೂ ಮುನ್ನ ಶಿಕ್ಷಕನನ್ನು ಬಂಧಿಸಬೇಕು ಎಂದು ಒತ್ತಾಯಿಸಿ, ಪೊಲೀಸ್‌ ವಾಹನವೊಂದಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆ ತೀವ್ರಗೊಂಡ ಬೆನ್ನಲ್ಲೇ 10ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದಿರುವುದಾಗಿಸಿಂಗ್‌ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.