ಅಯೋಧ್ಯೆ ರಾಮಮಂದಿರ
(ಪಿಟಿಐ ಚಿತ್ರ)
ಲಖನೌ (ಉತ್ತರಪ್ರದೇಶ): ಅಯೋಧ್ಯೆಯ ರಾಮಮಂದಿರ ಟ್ರಸ್ಟ್‌ಗೆ ಬೆದರಿಕೆ ಇ–ಮೇಲ್ ಬಂದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.
ರಾಮ ಮಂದಿರದ ಭದ್ರತೆಗೆ ಸಂಬಂಧಿಸಿದಂತೆ ಬೆದರಿಕೆ ಇ–ಮೇಲ್‌ನನ್ನು ರಾಮಮಂದಿರ ಟ್ರಸ್ಟ್ ಸ್ವೀಕರಿಸಿದ್ದು, ತನಿಖೆ ಚುರುಕುಗೊಳಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ತಮಿಳುನಾಡಿನ ಅಪರಿಚಿತ ವ್ಯಕ್ತಿಯೊಬ್ಬರಿಂದ ಇ–ಮೇಲ್ ಬಂದಿದೆ. ಇಷ್ಟನ್ನು ಹೊರತುಪಡಿಸಿ, ಪೊಲೀಸರು ಹೆಚ್ಚಿನ ಮಾಹಿತಿಯನ್ನು ಬಹಿರಂಗಪಡಿಸಿಲ್ಲ.
ಮೂಲಗಳ ಪ್ರಕಾರ, ಭಾನುವಾರ ತಡರಾತ್ರಿ ಮತ್ತು ಇಂದು( ಸೋಮವಾರ) ಬೆದರಿಕೆ ಇ ಮೇಲ್ ಬಂದಿದೆ. ಈ ನಿಟ್ಟಿನಲ್ಲಿ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಲ್ಲಿಯವರೆಗೆ, ರಾಮ ಮಂದಿರ ಟ್ರಸ್ಟ್ ಯಾವುದೇ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.