ಸಾಂದರ್ಭಿಕ ಚಿತ್ರ
ಸೀತಾಪುರ (ಉತ್ತರ ಪ್ರದೇಶ): ಇಲ್ಲಿನ ರತನಗಂಜ್ ಗ್ರಾಮದಲ್ಲಿರುವ ಶಾರದಾ ನದಿಯಲ್ಲಿ ದೋಣಿ ಮಗುಚಿ ಶನಿವಾರ ಮೂವರು ಮೃತಪಟ್ಟಿದ್ದಾರೆ. ಬೋಟ್‌ನಲ್ಲಿ 16 ಮಂದಿ ಪ್ರಯಾಣಿಸುತ್ತಿದ್ದರು.
‘ಹೋಳಿ ಹಬ್ಬದ ದಿನದಂದು ಇದೇ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದ ವ್ಯಕ್ತಿಯೊಬ್ಬರ ಅಂತ್ಯಸಂಸ್ಕಾರಕ್ಕೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. 16 ಮಂದಿಯನ್ನೂ ರಕ್ಷಣೆ ಮಾಡಿ, ಹತ್ತಿರದ ಆಸ್ಪತ್ರೆಗೆ ದಾಖಲಿಸಿದೆವು. ಆದರೆ, ಆಸ್ಪತ್ರೆಯಲ್ಲಿ ಮೂವರು ಮೃತಪಟ್ಟರು’ ಎಂದು ಪೊಲೀಸರು ಮಾಹಿತಿ ನೀಡಿದರು.
‘ಎರಡು ವರ್ಷದ ಮಗುವನ್ನು ರಕ್ಷಿಸಿ, ಚಿಕಿತ್ಸೆ ಕೊಡಿಸಿ, ಮನೆಗೆ ಕಳುಹಿಸಲಾಯಿತು. 12 ಮಂದಿ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ’ ಎಂದರು.
ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.