ಸಾವು (ಪ್ರಾತಿನಿಧಿಕ ಚಿತ್ರ)
ಮುಜಾಫ್ಫರ್‌ನಗರ: ತಾವು ತೋರಿಸಿದ ಹುಡುಗನನ್ನು ಮದುವೆಯಾಗಲು ಒಪ್ಪದ ಮಗಳನ್ನು ತಂದೆಯೇ ಉಸಿರುಗಟ್ಟಿಸಿ ಕೊಲೆ ಮಾಡಿರುವ ಪ್ರಕರಣ ಮುಜಾಫ್ಫರ್‌ನಗರದಲ್ಲಿ ನಡೆದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
20 ವರ್ಷದ ಮಗಳನ್ನು ಕೊಲೆ ಮಾಡಿದ ಬಳಿಕ ಆರೋಪಿ ಗಯ್ಯೂರ್ ಎಂಬಾತ ಸ್ವತಃ ಠಾಣೆಗೆ ಬಂದು ಶರಣಾಗಿ, ಕೃತ್ಯದ ಬಗ್ಗೆ ತಿಳಿಸಿದ್ದಾನೆ.
ಈ ಕುರಿತು ಮಾಧ್ಯಮದವರಿಗೆ ಮಾಹಿತಿ ನೀಡಿರುವ ನಗರ ಠಾಣೆ ಇನ್‌ಸ್ಟೆಕ್ಟರ್ ಕೆ.ಮಿಶ್ರಾ, ಪ್ರಕರಣ ದಾಖಲಿಸಿಕೊಂಡಿದ್ದೇವೆ. ಆರೋಪಿಯನ್ನು ಶನಿವಾರ ರಾತ್ರಿ ಬಂಧಿಸಲಾಗಿದೆ ಎಂದಿದ್ದಾರೆ.
ಯುವತಿಯು ಮತ್ತೊಬ್ಬ ವ್ಯಕ್ತಿಯನ್ನು ಮದುವೆಯಾಗಲು ಬಯಸಿದ್ದಳು. ಅದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಆಕೆಯ ಪೋಷಕರು, ಇನ್ನೊಬ್ಬನೊಂದಿಗೆ ಮದುವೆ ಮಾಡಲು ಮುಂದಾಗಿದ್ದರು ಎಂದು ಸ್ಥಳೀಯರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.