ADVERTISEMENT

ಉತ್ತರಾಖಂಡ ರಾಜ್ಯ ಸ್ಥಾಪನೆಗೊಂಡು 25 ವರ್ಷ:₹8,260 ಕೋಟಿ ಯೋಜನೆಗಳಿಗೆ ಮೋದಿ ಚಾಲನೆ

ಪಿಟಿಐ
Published 9 ನವೆಂಬರ್ 2025, 13:53 IST
Last Updated 9 ನವೆಂಬರ್ 2025, 13:53 IST
ಉತ್ತರಾಖಂಡ ಸಂಸ್ಥಾಪನಾ ದಿನದ ಅಂಗವಾಗಿ ಡೆಹ್ರಾಡೂನ್‌ನಲ್ಲಿ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ಮುಖ್ಯಮಂತ್ರಿ ಪುಷ್ಕರ್‌ ಸಿಂಗ್‌ ಧಾಮಿ, ರಾಜ್ಯಪಾಲ ಲೆಫ್ಟಿನೆಂಟ್‌ ಜನರಲ್‌ (ನಿವೃತ್ತ) ಗುರ್ಮೀತ್‌ ಸಿಂಗ್‌, ವಿವಿಧ ಸಚಿವರು ಜೊತೆಗಿದ್ದರು–ಪಿಟಿಐ ಚಿತ್ರ

ಡೆಹ್ರಾಡೂನ್‌: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಉತ್ತರಾಖಂಡದಲ್ಲಿ ₹8,260 ಕೋಟಿ ವೆಚ್ಚದ ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿದರು.

ರಾಜ್ಯ ಸ್ಥಾಪನೆಗೊಂಡು 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು, ಕುಡಿಯುವ ನೀರು, ನೀರಾವರಿ, ತಾಂತ್ರಿಕ ಶಿಕ್ಷಣ, ಇಂಧನ, ನಗರಾಭಿವೃದ್ಧಿ ಹಾಗೂ ಕ್ರೀಡೆ ಹಾಗೂ ಕೌಶಲ ಅಭಿವೃದ್ಧಿಗೆ ಸಂಬಂಧಿಸಿದ ಯೋಜನೆಗಳಿಗೆ ಚಾಲನೆ ನೀಡಿದರು.

ಇದೇ ವೇಳೆ ‘ಅಮೃತ್‌ ಯೋಜನೆ’ ಅಡಿಯಲ್ಲಿ ಡೆಹ್ರಾಡೂನ್‌ನ 23 ವಲಯಗಳಿಗೆ ಕುಡಿಯುವ ನೀರು ಪೂರೈಕೆ ಯೋಜನೆ, ಪಿಥೋರಗಢದಲ್ಲಿ ಇಲೆಕ್ಟ್ರಿಕಲ್‌ ಸಬ್‌ ಸ್ಟೇಷನ್‌, ಸರ್ಕಾರಿ ಕಚೇರಿಗಳಲ್ಲಿ ಸೌರ ವಿದ್ಯುತ್‌ ಯೋಜನೆ, ನೈನಿತಾಲ್‌ನ ಹಲ್ದ್ವಾನಿ ಕ್ರೀಡಾಂಗಣದಲ್ಲಿ ಅಸ್ಟ್ರೋಟರ್ಫ್‌ ಹಾಕಿ ಮೈದಾನವನ್ನು ಉದ್ಘಾಟಿಸಿದರು.

ADVERTISEMENT
ನೆರೆದಿದ್ದ ಜನರತ್ತ ಕೈ ಬೀಸಿದ ಪ್ರಧಾನಿ ನರೇಂದ್ರ ಮೋದಿ–ಪಿಟಿಐ ಚಿತ್ರ