ADVERTISEMENT

ಉತ್ತರಾಖಂಡ: ಬಿಜೆಪಿ ಶಾಸಕ ಹರಬಂಸ್ ಕಪೂರ್ ನಿಧನ, ಪ್ರಧಾನಿ ಸಂತಾಪ

ಪಿಟಿಐ
Published 13 ಡಿಸೆಂಬರ್ 2021, 7:12 IST
Last Updated 13 ಡಿಸೆಂಬರ್ 2021, 7:12 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಡೆಹ್ರಾಡೂನ್: ಉತ್ತರಾಖಂಡದ ಬಿಜೆಪಿ ಶಾಸಕ ಹಾಗೂ ಮಾಜಿ ಸ್ಪೀಕರ್ ಹರಬಂಸ್ ಕಪೂರ್ ಸೋಮವಾರ ಮುಂಜಾನೆ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 75 ವರ್ಷ ವಯಸ್ಸಾಗಿತ್ತು.

ಎಂಟು ಬಾರಿ ಶಾಸಕರಾಗಿದ್ದ ಕಪೂರ್, ಉತ್ತರಾಖಂಡದ ವಿಧಾನಸಭೆಯ ಹಿರಿಯ ಸದಸ್ಯರಲ್ಲಿ ಒಬ್ಬರಾಗಿದ್ದರು. ಅವರು ಡೆಹ್ರಾಡೂನ್ ಕಂಟೋನ್ಮೆಂಟ್ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು.

ಹರಬಂಸ್ ಕಪೂರ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ. 'ಉತ್ತರಾಖಂಡದ ತಮ್ಮ ಪಕ್ಷದ ಸಹೋದ್ಯೋಗಿ ಹರಬಂಸ್ ಕಪೂರ್ಅವರ ನಿಧನದಿಂದ ದುಃಖವಾಗಿದೆ. ಹಿರಿಯ ಶಾಸಕ ಹಾಗೂ ಆಡಳಿತಗಾರ ಕಪೂರ್ ಅವರನ್ನು ಸಾರ್ವಜನಿಕ ಸೇವೆ ಮತ್ತು ಸಮಾಜ ಕಲ್ಯಾಣಕ್ಕಾಗಿ ನೀಡಿದ ಕೊಡುಗೆಗಳಿಗಾಗಿ ಸ್ಮರಿಸಲಾಗುವುದು. ಅವರ ಕುಟುಂಬ ಹಾಗೂ ಬೆಂಬಲಿಗರಿಗೆ ಸಂತಾಪ ಸೂಚಿಸುತ್ತೇನೆ. ಓಂ ಶಾಂತಿ' ಎಂದು ಟ್ವೀಟ್ ಮಾಡಿದ್ದಾರೆ.

ADVERTISEMENT

ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಕಪೂರ್ ನಿವಾಸಕ್ಕೆ ಭೇಟಿ ನೀಡಿ ಅಗಲಿದನಾಯಕನಿಗೆ ಶ್ರದ್ಧಾಂಜಲಿ ಅರ್ಪಿಸಿ ಕುಟುಂಬ ವರ್ಗಕ್ಕೆ ಸಾಂತ್ವನ ಹೇಳಿದರು.

'ವಿಧಾನಸಭಾ ಚುನಾವಣೆಯಲ್ಲಿ ಎಂಟು ಬಾರಿ ಗೆದ್ದು ಬಂದಿರುವುದು ಅವರ ಜನಪ್ರಿಯತೆಯನ್ನು ಸಾಬೀತುಪಡಿಸುತ್ತದೆ. ಅಲ್ಲದೆ ಯಾವಾಗಲೂ ಕ್ಷೇತ್ರದ ಅಭಿವೃದ್ಧಿಗಾಗಿದನಿಯಾಗಿದ್ದರು' ಎಂದು ಕಪೂರ್ ಅವರನ್ನು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.