(ಚಿತ್ರ ಕೃಪೆ: X/@PTI_News)
ರುದ್ರಪ್ರಯಾಗ್: ಉತ್ತರಾಖಂಡದ ರುದ್ರಪ್ರಯಾಗದಲ್ಲಿ ಅಲಕಾನಂದ ನದಿಗೆ ಬಸ್ ಉರುಳಿದ್ದ ಪರಿಣಾಮ ಮೂವರು ಮೃತಪಟ್ಟಿದ್ದು, 9 ಮಂದಿ ಕಾಣೆಯಾಗಿದ್ದಾರೆ.
ರಾಜಸ್ಥಾನ, ಗುಜರಾತ್. ಮಧ್ಯಪ್ರದೇಶ, ಮಹಾರಾಷ್ಟ್ರದ ಒಟ್ಟು 31 ಮಂದಿ ಭಕ್ತರು ಬದರಿನಾಥಕ್ಕೆ ಹೊರಟಿದ್ದರು. ಈ ವೇಳೆ ರುದ್ರಪ್ರಯಾಗದ ದೋಲ್‌ತೀರ್ ಪ್ರದೇಶದಲ್ಲಿ ಅಪಘಾತ ಸಂಭವಿಸಿದೆ. ದುರಂತದಲ್ಲಿ 8 ಮಂದಿ ಗಾಯಗೊಂಡಿದ್ದಾರೆ,
ಸ್ಥಳೀಯರ ಸಹಾಯದಿಂದ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಮೂರು ಮೃತದೇಹಗಳನ್ನು ಹೊರಕ್ಕೆ ತರಲಾಗಿದೆ.
ಬೆಳಿಗ್ಗೆ 7.30ರ ಹೊತ್ತಿಗೆ ಅಪಘಾತ ಸಂಭವಿಸಿದೆ. ಎದುರಿನಿಂದ ಬಂದ ಟ್ರಕ್ ಗುದ್ದಿದ ಪರಿಣಾಮ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
‘10–20ಕಿಮೀವೇಗದಲ್ಲಿ ಚಾಲನೆ ಮಾಡುತ್ತಿದ್ದೆ, ಈ ವೇಳೆ ಎದುರಿನಿಂದ ಬಂದ ಟ್ರಕ್ ಗುದ್ದಿದ್ದು. ಕಂದಕಕ್ಕೆ ಬಿದ್ದಿದೆ’ ಎಂದು ಋಷಿಕೇಶದ ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಸ್ ಚಾಲಕ ಸುಮಿತ್ ಹೇಳಿದ್ದಾರೆ.
ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರಿದಿದೆ. ಗಾಯಾಗಳನ್ನು ಏರ್‌ಲಿಫ್ಟ್ ಮಾಡಲಾಗಿದ್ದು, ಋಷಿಕೇಶದ ಏಮ್ಸ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.