ADVERTISEMENT

ಉತ್ತರಾಖಂಡದಲ್ಲಿ ಮೇಘಸ್ಫೋಟ: 9 ಮಂದಿ ಕಾರ್ಮಿಕರು ನಾಪತ್ತೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 29 ಜೂನ್ 2025, 2:38 IST
Last Updated 29 ಜೂನ್ 2025, 2:38 IST
<div class="paragraphs"><p>ಉತ್ತರಾಖಂಡದಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತ ಸಂಭವಿಸಿದೆ</p></div>

ಉತ್ತರಾಖಂಡದಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತ ಸಂಭವಿಸಿದೆ

   

–ಪಿಟಿಐ ಚಿತ್ರ

ರುದ್ರಪ್ರಯಾಗ: ಉತ್ತರಾಖಂಡದ ಬಾಲಿಗಢದಲ್ಲಿ ಮೇಘಸ್ಫೋಟದಿಂದ ಹಠಾತ್ ಪ್ರವಾಹ ಉಂಟಾಗಿ ನಿರ್ಮಾಣ ಹಂತದ ಹೋಟೆಲ್‌ನಲ್ಲಿದ್ದ ಒಂಬತ್ತು ಕಾರ್ಮಿಕರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಬಾರ್ಕೋಟ್-ಯಮುನೋತ್ರಿ ರಸ್ತೆಯಲ್ಲಿ ಮೇಘಸ್ಫೋಟ ಸಂಭವಿಸಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್), ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಮತ್ತು ಪೊಲೀಸರ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ ಎಂದು ಉತ್ತರಕಾಶಿ ಜಿಲ್ಲಾಧಿಕಾರಿ ಪ್ರಶಾಂತ್ ಆರ್ಯ ತಿಳಿಸಿದ್ದಾರೆ.

ಉತ್ತರಾಖಂಡದ ಹಲವು ಭಾಗಗಳಲ್ಲಿ ಕಳೆದರೆಡು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದ್ದು, ಗುಡ್ಡದ ಮಣ್ಣು ಮತ್ತು ಇತರೆ ಅವಶೇಷಗಳು ರಸ್ತೆಗೆ ಬೀಳುತ್ತಿರುವುದರಿಂದ ವಾಹನ ಸಂಚಾರ ನಿರ್ಬಂಧಿಸಲಾಗಿದೆ ಎಂದು ಆರ್ಯ ಮಾಹಿತಿ ನೀಡಿದ್ದಾರೆ.

ಈಚೆಗೆ ಯಮುನೋತ್ರಿ ದೇವಸ್ಥಾನಕ್ಕೆ ಹೋಗುವ ಮಾರ್ಗದಲ್ಲಿ ಭೂಕುಸಿತ ಸಂಭವಿಸಿತ್ತು. ಘಟನೆಯಲ್ಲಿ ಇಬ್ಬರು ಯಾತ್ರಿಕರು ಮೃತಪಟ್ಟಿದ್ದು, ಓರ್ವನನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದರು.

ಹಿಮಾಚಲ ಪ್ರದೇಶದ ಕಂಗ್ರಾ ಜಿಲ್ಲೆಯಲ್ಲಿರುವ ಜಲವಿದ್ಯುತ್‌ ಯೋಜನಾ ಸ್ಥಳದಲ್ಲಿ ಸಂಭವಿಸಿದ್ದ ಹಠಾತ್‌ ಪ್ರವಾಹದಿಂದಾಗಿ ನಾಲ್ವರು ಸಾವಿಗೀಡಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.