ADVERTISEMENT

ಉತ್ತರಾಖಂಡ್‌ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್‌ಗೆ ಕೋವಿಡ್-19 ದೃಢ

ಏಜೆನ್ಸೀಸ್
Published 18 ಡಿಸೆಂಬರ್ 2020, 12:33 IST
Last Updated 18 ಡಿಸೆಂಬರ್ 2020, 12:33 IST
ಉತ್ತರಾಖಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್
ಉತ್ತರಾಖಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್   

ಡೆಹರಾಡೂನ್‌: ಉತ್ತರಾಖಂಡ್ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ಶುಕ್ರವಾರ ದೃಢಪಟ್ಟಿದೆ.

ಈ ಕುರಿತು ಟ್ವೀಟ್ ಮಾಡಿರುವ ರಾವತ್, ಕೋವಿಡ್-19 ದೃಢಪಟ್ಟ ಬಳಿಕ ಹೋಂ ಕ್ವಾರಂಟೈನ್‌ಗೆ ತೆರಳುತ್ತಿದ್ದೇನೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದವರೆಲ್ಲರೂ ಪ್ರತ್ಯೇಕ ವಾಸಕ್ಕೆ ಒಳಗಾಗಿ ಮತ್ತು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

ಇಂದು ನಾನು ಕೊರೊನಾ ಪರೀಕ್ಷೆಯನ್ನು ಮಾಡಿಸಿದ್ದೇನೆ ಮತ್ತು ವರದಿಯು ಪಾಸಿಟಿವ್ ಬಂದಿದೆ. ನನ್ನ ಆರೋಗ್ಯವು ಉತ್ತಮವಾಗಿದೆ ಮತ್ತು ನನಗೆ ಯಾವುದೇ ಲಕ್ಷಣಗಳಿಲ್ಲ. ವೈದ್ಯರ ಸಲಹೆಯ ಮೇರೆಗೆ ನಾನು ಹೋಂ ಕ್ವಾರಂಟೈನ್‌ನಲ್ಲಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು ಕೂಡಲೇ ಪ್ರತ್ಯೇಕ ವಾಸಕ್ಕೆ ಮುಂದಾಗಿ ಮತ್ತು ಪರೀಕ್ಷೆಗೆ ಒಳಗಾಗಿ ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ADVERTISEMENT

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಉತ್ತರಾಖಂಡ್‌ನಲ್ಲಿ 6,062 ಸಕ್ರಿಯ ಪ್ರಕರಣಗಳಿದ್ದು, 77,243 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ ಮತ್ತು ಈವರೆಗೆ 1,384 ಜನರು ಸಾವಿಗೀಡಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.