ಡೆಹ್ರಾಡೂನ್‌ನಲ್ಲಿ ಮೇಘಸ್ಫೋಟ
(ಪಿಟಿಐ ಚಿತ್ರ)
ಡೆಹ್ರಾಡೂನ್: ಉತ್ತರಾಖಂಡದ ವಿವಿಧೆಡೆ ಸೋಮವಾರ ರಾತ್ರಿಯಿಂದಲೇ ಭಾರಿ ಮಳೆಯಾಗುತ್ತಿದೆ. ಡೆಹ್ರಾಡೂನ್‌ನಲ್ಲಿ ಮೇಘಸ್ಫೋಟ ಸಂಭವಿಸಿದ ಪರಿಣಾಮ ದಿಢೀರ್ ಪ್ರವಾಹದ ಸ್ಥಿತಿ ಉಂಟಾಗಿದ್ದು, ಹಲವರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.
ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆಗಳು, ಮನೆಗಳು, ಅಂಗಡಿಗಳು ಹಾನಿಗೊಂಡಿವೆ. ಮಂಗಳವಾರ ಮುಂಜಾನೆ ಸೇತುವೆಯೊಂದು ಕೊಚ್ಚಿ ಹೋಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಡೆಹ್ರಾಡೂನ್‌ನ ಸಹಸ್ರಧಾರ, ಮಾಲ್ ದೇವತಾ ಮತ್ತು ಮಸ್ಸೂರಿಯಲ್ಲಿ ಹಾನಿ ಉಂಟಾಗಿದೆ. ಇಬ್ಬರಿಂದ ಮೂವರು ಮಂದಿ ಕಾಣೆಯಾಗಿದ್ದಾರೆ. ಇನ್ನೊಬ್ಬರು ಮೃತಪಟ್ಟಿರುವ ಬಗ್ಗೆಯೂ ವರದಿಯಾಗಿದೆ. ಈ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ವಿಪತ್ತು ನಿರ್ವಹಣಾ ಕಾರ್ಯದರ್ಶಿ ವಿನೋದ್ ಕುಮಾರ್ ಸುಮನ್ ತಿಳಿಸಿದ್ದಾರೆ.
ಪ್ರಹಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಹಾಗೂ ಪರಿಹಾರ ಕಾರ್ಯ ನಡೆಯುತ್ತಿದ್ದು, 300ರಿಂದ 400ರಷ್ಟು ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ನೀರಿನ ಮಟ್ಟ ದಿಢೀರ್ ಏರಿಕೆಯಾದ ಪರಿಣಾಮ ಹಲವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ನೈನಿತಾಲ್‌ನಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ.
ತುರ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಿಎಂ ಪುಷ್ಕರ್ ಸಿಂಗ್ ಧಾಮಿ ಸೂಚಿಸಿದ್ದಾರೆ.
ಡೆಹ್ರಾಡೂನ್‌ಲ್ಲಿ ಮಳೆ ಬಾಧಿತ ಪ್ರದೇಶಗಳಿಗೆ ಭೇಟಿ ನೀಡಿರುವ ಸಿಎಂ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಅಧಿಕಾರಿಗಳು ಜೊತೆಗಿದ್ದರು.
ಡೆಹ್ರಾಡೂನ್‌ನಲ್ಲಿ ಮೇಘಸ್ಫೋಟ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.