ಕಾಂಗ್ರೆಸ್ ಮುಖಂಡ ಮನೀಶ್ ಖಂಡೂರಿ ಶನಿವಾರ ಡೆಹ್ರಾಡೂನ್‌ನಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ಅಧ್ಯಕ್ಷ ಮಹೇಂದ್ರ ಭಟ್, ರಾಜ್ಯ ಉಸ್ತುವಾರಿ ದುಷ್ಯಂತ್ ಕುಮಾರ್ ಗೌತಮ್ ಇದ್ದಾರೆ
–ಪಿಟಿಐ ಚಿತ್ರ
ಡೆಹ್ರಾಡೂನ್: ಉತ್ತರಾಖಂಡದ ಮುಖ್ಯಮಂತ್ರಿಯಾಗಿದ್ದ ಬಿ.ಸಿ.ಖಂಡೂರಿ ಅವರ ಪುತ್ರ ಮನೀಶ್ ಖಂಡೂರಿ ಅವರು ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಂಡರು.
ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ಶುಕ್ರವಾರ ರಾಜೀನಾಮೆ ನೀಡಿದ್ದ ಮನೀಶ್ ಅವರು ಬಿಜೆಪಿ ಕಚೇರಿಯಲ್ಲಿ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ರಾಜ್ಯ ಘಟಕದ ಅಧ್ಯಕ್ಷ ಮಹೇಂದ್ರ ಭಟ್ ಮತ್ತು ಪಕ್ಷದ ರಾಜ್ಯ ಉಸ್ತುವಾರಿ ದುಷ್ಯಂತ್‌ಕುಮಾರ್ ಗೌತಮ್ ಸಮ್ಮುಖದಲ್ಲಿ ಶನಿವಾರ ಪಕ್ಷಕ್ಕೆ ಸೇರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.