ADVERTISEMENT

ಉತ್ತರಾಖಂಡ ರಾಜ್ಯಪಾಲೆ ಬೇಬಿ ರಾಣಿ ಮೌರ್ಯ ರಾಜೀನಾಮೆ

ಪಿಟಿಐ
Published 8 ಸೆಪ್ಟೆಂಬರ್ 2021, 9:55 IST
Last Updated 8 ಸೆಪ್ಟೆಂಬರ್ 2021, 9:55 IST
ಬೇಬಿ ರಾಣಿ ಮೌರ್ಯ
ಬೇಬಿ ರಾಣಿ ಮೌರ್ಯ   

ಡೆಹ್ರಾಡೂನ್: ಉತ್ತರಾಖಂಡ ರಾಜ್ಯಪಾಲೆ ಬೇಬಿ ರಾಣಿ ಮೌರ್ಯ ಅವರು ಬುಧವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

‘ಬೇಬಿ ರಾಣಿ ಮೌರ್ಯ ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಸಲ್ಲಿಸಿದ್ದಾರೆ. ವೈಯಕ್ತಿಕ ಕಾರಣಗಳಿಂದಾಗಿ ಅವರು ಈ ನಿರ್ಧಾರ ಕೈಗೊಂಡಿದ್ದಾರೆ’ ಎಂದು ರಾಜಭವನದ ಅಧಿಕಾರಿಯೊಬ್ಬರು ಹೇಳಿದರು.

ಅಧಿಕಾರ ಅವಧಿ ಪೂರ್ಣಗೊಳ್ಳುವ ಎರಡು ವರ್ಷ ಮೊದಲೇ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ADVERTISEMENT

2018, ಆಗಸ್ಟ್‌ 6ರಂದು ಬೇಬಿ ರಾಣಿ ಅವರು ಉತ್ತರಾಖಂಡ ರಾಜ್ಯಪಾಲೆಯಾಗಿ ಅಧಿಕಾರ ಸ್ವೀಕರಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.