ADVERTISEMENT

ಉತ್ತರಾಖಂಡ | ಮಾಣಾ ಹಿಮಕುಸಿತ: ತನಿಖೆಗೆ ಆದೇಶ

ಪಿಟಿಐ
Published 4 ಮಾರ್ಚ್ 2025, 14:37 IST
Last Updated 4 ಮಾರ್ಚ್ 2025, 14:37 IST
<div class="paragraphs"><p>ಮಾಣಾ ಗ್ರಾಮದಲ್ಲಿ ಸಂಭವಿಸಿದ ಹಿಮಕುಸಿತದಲ್ಲಿ ಸಿಲುಕಿದ್ದ ಕಾರ್ಮಿಕರನ್ನು ಯೋಧರು ಹೊತ್ತುತಂದ ಸಂದರ್ಭ</p></div>

ಮಾಣಾ ಗ್ರಾಮದಲ್ಲಿ ಸಂಭವಿಸಿದ ಹಿಮಕುಸಿತದಲ್ಲಿ ಸಿಲುಕಿದ್ದ ಕಾರ್ಮಿಕರನ್ನು ಯೋಧರು ಹೊತ್ತುತಂದ ಸಂದರ್ಭ

   

–ಪಿಟಿಐ ಚಿತ್ರ

ಗೋಪೇಶ್ವರ: ಉತ್ತರಾಖಂಡದ ಚಮೋಲಿ ಜಿಲ್ಲೆಯ ಮಾಣಾ ಗ್ರಾಮದಲ್ಲಿ ಈಚೆಗೆ ಸಂಭವಿಸಿದ್ದ ಹಿಮಕುಸಿತಕ್ಕೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಲಾಗಿದೆ.

ADVERTISEMENT

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮ್ಯಾಜಿಸ್ಟ್ರೇಟ್‌ ಸಂದೀಪ್‌ ತಿವಾರಿ ಅವರು ತನಿಖೆಗೆ ಆದೇಶಿಸಿದ್ದಾರೆ ಎಂದು ವರದಿಯಾಗಿದೆ.

‘ಜ್ಯೋತಿರ್ಮಠದ ಉಪ ವಿಭಾಗಾಧಿಕಾರಿಯನ್ನು ತನಿಖಾಧಿಕಾರಿಯಾಗಿ ನೇಮಿಸಿದ್ದು, 15 ದಿನಗಳ ಒಳಗಾಗಿ ವರದಿ ಸಲ್ಲಿಸಬೇಕು’ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್‌ ತಮ್ಮ ಆದೇಶದಲ್ಲಿ ಹೇಳಿದ್ದಾರೆ.

ಮಾಣಾ ಮತ್ತು ಬದರೀನಾಥದ ನಡುವೆ ಇರುವ ಗಡಿ ರಸ್ತೆಗಳ ಸಂಸ್ಥೆಯ (ಬಿಆರ್‌ಒ) ಶಿಬಿರದಲ್ಲಿ ಶುಕ್ರವಾರ ಮುಂಜಾನೆ ಹಿಮಕುಸಿತ ಉಂಟಾಗಿತ್ತು. ಹಿಮಕುಸಿತವಾಗಿದ್ದರಿಂದ 54 ಮಂದಿ ಸಿಲುಕಿದ್ದರು. 8 ಮಂದಿ ಕಾರ್ಮಿಕರು ಮೃತಪಟ್ಟಿದ್ದರು. 60 ಗಂಟೆಗಳ ರಕ್ಷಣಾ ಕಾರ್ಯಾಚರಣೆಯನ್ನು ಅಧಿಕಾರಿಗಳು ಭಾನುವಾರ ಅಂತ್ಯಗೊಳಿಸಿದ್ದರು.

ಹಿಮಕುಸಿತ ಸಂಭವಿಸುತ್ತಿದ್ದಂತೆ, ಕೇಂದ್ರ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು, ಇಂಡೋ–ಟಿಬೆಟಿಯನ್‌ ಪಡೆ, ಬಿಆರ್‌ಒ, ಜಿಲ್ಲಾಡಳಿತ, ಆರೋಗ್ಯ ಹಾಗೂ ಆಗ್ನಿಶಾಮಕ ಇಲಾಖೆಯ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದರು.

‘ಸೇನೆಯ 6 ಹೆಲಿಕಾಪ್ಟರ್‌, ಶ್ವಾನದಳ ಹಾಗೂ ಥರ್ಮಲ್‌ ಇಮೇಜಿಂಗ್‌ ತಂತ್ರಜ್ಞಾನ ಬಳಸಿಕೊಂಡು ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು’ ಎಂದು ಅಧಿಕಾರಿಗಳು ತಿಳಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.