ಉತ್ತರಾಖಂಡ: ಏಳು ದಿನಗಳ ಒಳಗಾಗಿ ಉತ್ತರಾಖಂಡ ಆಸ್ಪತ್ರೆಗಳಲ್ಲಿ ಕೊವಿಡ್ 19 ಸಮಸ್ಯೆಗಳನ್ನು ತಡೆಗಟ್ಟುವ ಸಲುವಾಗಿ ಎಲ್ಲಾ ಉಪಕರಣಗಳನ್ನು ಅಳವಡಿಸಬೇಕೆಂದು ನೈನಿತಾಲ್ ಹೈಕೋರ್ಟ್ ಸರ್ಕಾರಕ್ಕೆ ಆದೇಶಿಸಿದೆ.
ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟುವ ಸಂಬಂಧ ವಿಚಾರಣೆ ನಡೆಸಿದ ನೈನಿತಾಲ್ ಹೈಕೋರ್ಟ್ , ಉತ್ತರಾಖಂಡ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಈ ಉಪಕರಣಗಳು, ಅಗತ್ಯ ಸೌಲಭ್ಯಗಳನ್ನುಒದಗಿಸುವಂತೆ ಆದೇಶದಲ್ಲಿ ತಿಳಿಸಿದೆ. ಈ ಕುರಿತು ಮುಂದಿನ ವಿಚಾರಣೆಯನ್ನು ಏಪ್ರಿಲ್ 29ಕ್ಕೆ ಮುಂದೂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.