ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ಬುಧವಾರ ಸುರಿದ ಮಳೆಯಿಂದಾಗಿ ಹೋಟೆಲ್ ಕಟ್ಟಡವೊಂದಕ್ಕೆ ಭಾರಿ ಹಾನಿಯಾಗಿದೆ ಪಿಟಿಐ ಚಿತ್ರ
ಡೆಹ್ರಾಡೂನ್: ಮೇಘಸ್ಫೋಟ ಹಾಗೂ ಭಾರಿ ಮಳೆಯಿಂದಾಗಿ ಡೆಹ್ರಾಡೂನ್ ಮತ್ತು ಮಸೂರಿ ನಡುವಿನ ರಸ್ತೆ ಸಂಪರ್ಕ ಕಡಿತಗೊಂಡಿದೆ. ಹೀಗಾಗಿ ಮಸೂರಿಯಲ್ಲಿ ಅಂದಾಜು 2,500 ಪ್ರವಾಸಿಗರು ಬುಧವಾರ ಸಿಕ್ಕಿಹಾಕಿಕೊಂಡಿದ್ದಾರೆ
‘ಡೆಹ್ರಾಡೂನ್–ಮಸೂರಿ ಮಾರ್ಗದ ಹಲವೆಡೆ ರಸ್ತೆಗಳಿಗೆ ಹಾನಿಯಾಗಿದೆ. ದುರಸ್ತಿ ಬಳಿಕ ರಸ್ತೆಗಳನ್ನು ಸಂಚಾರಕ್ಕೆ ಮುಕ್ತಗೊಳಿಸುವವರೆಗೆ, ತಾವು ಉಳಿದುಕೊಂಡಿರುವ ಹೋಟೆಲ್ ಅಥವಾ ಹೋಂಸ್ಟೇಗಳಲ್ಲಿಯೇ ಪ್ರವಾಸಿಗರು ಇರಬೇಕು’ ಎಂದು ಪೊಲೀಸರು ಮನವಿ ಮಾಡಿದ್ದಾರೆ.
ಕೊಲ್ಹುಖೇತ್ ಬಳಿ ತಾತ್ಕಾಲಿಕ ಸೇತುವೆ ನಿರ್ಮಿಸಿ, ವಾಹನಗಳ ಸಂಚಾರಕ್ಕೆ ಅನುಕೂಲ ಮಾಡಿಕೊಡಲು ಸಿದ್ಧತೆ ನಡೆಯುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.