ADVERTISEMENT

ಉತ್ತರಾಖಂಡ: ಮಾಜಿ ಅಗ್ನಿವೀರರಿಗೆ ಸರ್ಕಾರಿ ಹುದ್ದೆಗಳಲ್ಲಿ ಶೇ 10ರಷ್ಟು ಮೀಸಲಾತಿ

ಪಿಟಿಐ
Published 14 ಆಗಸ್ಟ್ 2025, 1:58 IST
Last Updated 14 ಆಗಸ್ಟ್ 2025, 1:58 IST
<div class="paragraphs"><p>ಅಗ್ನಿವೀರರು</p></div>

ಅಗ್ನಿವೀರರು

   

–ಪಿಟಿಐ ಚಿತ್ರ

ಡೆಹ್ರಾಡೂನ್: ಸಶಸ್ತ್ರ ಪಡೆಗಳಲ್ಲಿ ನಾಲ್ಕು ವರ್ಷಗಳ ಕಾಲ ಸೇವೆ ಸಲ್ಲಿಸಿದ ಮಾಜಿ ‘ಅಗ್ನಿವೀರ’ರಿಗೆ ಸರ್ಕಾರಿ ಹುದ್ದೆಗಳಲ್ಲಿ ಶೇ 10ರಷ್ಟು ಮೀಸಲಾತಿ ಕಲ್ಪಿಸಲು ಉತ್ತರಾಖಂಡ ಸಚಿವ ಸಂಪುಟ ಅನುಮೋದನೆ ನೀಡಿದೆ.

ADVERTISEMENT

ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಈ ಮೀಸಲಾತಿ ಸೌಲಭ್ಯವು ರಾಜ್ಯ ಸರ್ಕಾರದ ಗ್ರೂಪ್ ‘ಸಿ’ ಅಡಿಯಲ್ಲಿ ಬರುವ ಹುದ್ದೆಗಳಿಗೆ ಸಂಬಂಧಿಸಿದ್ದಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

‘ಅಗ್ನಿವೀರರ ನೇಮಕಕ್ಕೆ ಅನುವು ಮಾಡಿಕೊಡುವುದಕ್ಕಾಗಿ ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರಲಾಗಿದೆ. ನೇಮಕಾತಿ ವೇಳೆ, ವಯೋಮಿತಿ ಸಡಿಲಿಕೆ ಹಾಗೂ ದೈಹಿಕ ಸಾಮರ್ಥ್ಯ ಪರೀಕ್ಷೆಯಿಂದ ವಿನಾಯಿತಿಯಂತಹ ಪ್ರಯೋಜನಗಳನ್ನು ಸಹ ಅಗ್ನಿವೀರರಿಗೆ ನೀಡಲಾಗುತ್ತದೆ’ ಎಂದೂ ಮೂಲಗಳು ಹೇಳಿವೆ.

ಸಶಸ್ತ್ರ ಪಡೆಗಳಲ್ಲಿ ನಾಲ್ಕು ವರ್ಷಗಳ ಕಾಲ ಸೇವೆ ಪೂರೈಸುವ ‘ಅಗ್ನಿವೀರ’ರಿಗೆ ಕೇಂದ್ರೀಯ ಸಶಸ್ತ್ರ ಪೊಲೀಸ್‌ ಪಡೆಗಳು (ಸಿಎಪಿಎಫ್‌) ಹಾಗೂ ಅಸ್ಸಾಂ ರೈಫಲ್ಸ್‌ನಲ್ಲಿ ಶೇ 10ರಷ್ಟು ಮೀಸಲಾತಿಯನ್ನು ಕಲ್ಪಿಸಲಾಗುವುದು ಎಂದು ಕೇಂದ್ರ ಸರ್ಕಾರ 2024ರ ಜುಲೈಯಲ್ಲಿ ಘೋಷಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.