ADVERTISEMENT

ಉತ್ತರಾಖಂಡದಲ್ಲಿ ಭಾರಿ ಮಳೆ: 3 ಮನೆಗಳು ಕುಸಿತ, ಇಬ್ಬರ ಸಾವು

ಪಿಟಿಐ
Published 30 ಆಗಸ್ಟ್ 2021, 5:59 IST
Last Updated 30 ಆಗಸ್ಟ್ 2021, 5:59 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಪಿಥೋರಗಡ(ಉತ್ತರಾಖಂಡ): ಜಿಲ್ಲೆಯ ಧರ್ಚೌಲಾ ಉಪ ವಲಯ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಜುಮ್ಮಾ ಎಂಬ ಹಳ್ಳಿಯಲ್ಲಿ ಮೂರು ಮನೆಗಳು ಕುಸಿದು, ಇಬ್ಬರು ಸಾವನ್ನಪ್ಪಿದ್ದಾರೆ. ಹಲವು ಮಂದಿ ನಾಪತ್ತೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಆಶಿಷ್ ಚೌಹಾಣ್ ತಿಳಿಸಿದ್ದಾರೆ.

ವಿಪತ್ತು ನಿರ್ವಹಣಾ ತಂಡದ ಸದಸ್ಯರು ನಾಪತ್ತೆಯಾದವರಿಗಾಗಿ ಶೋಧಕಾರ್ಯ ಮುಂದುವರಿಸಿದ್ದಾರೆ. ಮನೆಗಳು ಕುಸಿದ ಸ್ಥಳದಲ್ಲಿ ಎರಡು ಮೃತದೇಹಗಳು ಪತ್ತೆಯಾಗಿವೆ.

‘ಪರಿಸ್ಥಿತಿಯನ್ನು ಹೇಗೆ ನಿಭಾಯಿಸಬೇಕೆಂದು ಚರ್ಚಿಸಲು ಅಧಿಕಾರಿ ವರ್ಗದ ತುರ್ತು ಸಭೆ ಕರೆಯಲಾಗಿದೆ‘ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.