ಉತ್ತರಾಖಂಡದ ಉತ್ತರಕಾಶಿಯಲ್ಲಿ ಮಂಗಳವಾರ ಏಕಾಏಕಿ ಭೀಕರ ಮೇಘಸ್ಫೋಟ ಸಂಭವಿಸಿದೆ
ಪಿಟಿಐ ಚಿತ್ರ
ಧಾರಾಲಿ ಖೀರಗರ್ದ್ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ಮಣ್ಣು ಮಿಶ್ರಿತ ನೀರು ರಭಸದಿಂದ ಹರಿಯುತ್ತಿದ್ದ ಪರಿಣಾಮ, ಹಲವಾರು ಮನೆಗಳು ಕೊಚ್ಚಿ ಹೋಗಿವೆ
ಖೀರಗಂಗಾ ನದಿಯ ಜಲಾನಯನ ಪ್ರದೇಶದಲ್ಲಿ ಮೇಘಸ್ಫೋಟ ಸಂಭವಿಸಿದ್ದರಿಂದ ದಿಢೀರ್ ಪ್ರವಾಹ ಕಂಡುಬಂದಿದೆ ಎಂದು ಸ್ಥಳೀಯರು ಹೇಳಿದ್ದಾರೆ.
ಹರ್ಸಿಲ್‌ನಿಂದ ಸೇನೆಯ ತುಕಡಿಯೊಂದು ಘಟನಾ ಸ್ಥಳಕ್ಕೆ ತೆರಳಿ, ಪರಿಹಾರ ಕಾರ್ಯ ಕೈಗೊಂಡಿದೆ
ಪ್ರವಾಸಿಗರು ಸೇರಿ 100ಕ್ಕೂ ಹೆಚ್ಚು ಜನರು ಕಟ್ಟಡಗಳ ಅವಶೇಷಗಳಡಿ ಸಿಲುಕಿರಬಹುದು ಎಂದು ಮೂಲಗಳು ಹೇಳಿದ್ದು, 20–25 ಹೋಟೆಲ್‌ಗಳು/ಹೋಂ ಸ್ಟೇಗಳು ಕೊಚ್ಚಿಕೊಂಡು ಹೋಗಿವೆ.
ಪ್ರವಾಹದಿಂದಾಗಿ ನೀರು ಗ್ರಾಮಕ್ಕೆ ನುಗ್ಗುತ್ತಿರುವುದು ಹಾಗೂ ಮನೆಗಳಿಗೆ ಹಾನಿಯಾಗುತ್ತಿರುವುದನ್ನು ತೋರಿಸುವ ವಿಡಿಯೊಗಳು ವ್ಯಾಪಕವಾಗಿ ಹಂಚಿಕೆಯಾಗಿವೆ
ಮಣ್ಣು ಮಿಶ್ರಿತ ನೀರು ಹಾಗೂ ಹೂಳು ತಗ್ಗು ಪ್ರದೇಶಗಳತ್ತ ನುಗ್ಗಿವೆ
ಭೀಕರ ಮೇಘಸ್ಫೋಟ ಸಂಭವಿಸಿದ ಹಿನ್ನೆಲೆ ಜಿಲ್ಲಾಡಳಿತವು ಸಹಾಯವಾಣಿ ಆರಂಭಿಸಿದೆ.
ಭಾರಿ ಪ್ರಮಾಣದಲ್ಲಿ ಗ್ರಾಮಕ್ಕೆ ನುಗ್ಗಿದ ನೀರು
ಧಾರಾಲಿ ಪ್ರದೇಶದಲ್ಲಿ ಭಾರಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿರುವ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ರೆಡ್ ಅಲರ್ಟ್ ಘೋಷಿಸಿದೆ.
ಭೀಕರ ಮೇಘಸ್ಫೋಟದ ಕಾರಣ ನಿವಾಸಿಗಳಲ್ಲಿ ಆತಂಕ ಮನೆ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.