ಧಾರಾಕಾರ ಮಳೆ (ಪ್ರಾತಿನಿಧಿಕ ಚಿತ್ರ )
ಲಖನೌ: ಉತ್ತರ ಪ್ರದೇಶದಲ್ಲಿ 24 ಗಂಟೆಗಳಲ್ಲಿ ಮಳೆ ಸಂಬಂಧಿಸಿದ ಅಪಘಾತಗಳಲ್ಲಿ 9 ಮಂದಿ ಮೃತಪಟ್ಟಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಶನಿವಾರ ಸಂಜೆ 6.30ರಿಂದ ಭಾನುವಾರ ಸಂಜೆ 6.30ರ ನಡುವೆ ಮಳೆ ಸಂಬಂಧಿತ ಘಟನೆಗಳಲ್ಲಿ 9 ಮಂದಿ ಮೃತಪಪಟ್ಟಿರುವುದಾಗಿ ವರದಿಯಾಗಿದೆ. ಈ ವೇಳೆ ರಾಜ್ಯದಲ್ಲಿ ಸರಾಸರಿ 1.7 ಮಿ.ಮೀ ಮಳೆ ದಾಖಲಾಗಿದೆ ಎಂದು ಇಲಾಖೆ ತಿಳಿಸಿದೆ
ಲಲಿತ್‌ಪುರದಲ್ಲಿ ನೀರಿನಲ್ಲಿ ಮುಳುಗಿ ಮೂವರು ಮೃತಪಟ್ಟರೆ, ಪ್ರತಾಪ್‌ಗಢ, ಅಲಿಗಢ ಮತ್ತು ಸಿದ್ಧಾರ್ಥ್ ನಗರ ಜಿಲ್ಲೆಗಳಲ್ಲಿ ತಲಾ ಇಬ್ಬರು ಮಳೆ ಸಂಬಂಧಿತ ಘಟನೆಗಳಲ್ಲಿ ಸಾವಿಗೀಡಾಗಿದ್ದಾರೆ ಎಂದು ಇಲಾಖೆ ಮಾಹಿತಿ ನೀಡಿದೆ.
ರಾಜ್ಯದ ಆರು ಜಿಲ್ಲೆಗಳಲ್ಲಿ ಅತಿವೃಷ್ಟಿಯಾಗಿದ್ದು, ಮಥುರಾ ಜಿಲ್ಲೆಯಲ್ಲಿ 31.8 ಮಿಮೀ ಅತಿ ಹೆಚ್ಚು ಮಳೆಯಾಗಿದೆ ಎಂದು ಇಲಾಖೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.