ಹೈದರಾಬಾದ್: ಭಾರತೀಯ ಔಷಧ ರಫ್ತು ಉತ್ತೇಜನ ಮಂಡಳಿ (ಫಾರ್ಮ್ಎಕ್ಸಿಲ್) ಮ್ಯಾರಿಯೊನ್ ಬಯೊಟೆಕ್ನ ಸದಸ್ಯತ್ವವನ್ನು ಅಮಾನತಿನಲ್ಲಿರಿಸಿದೆ. ಮ್ಯಾರಿಯೊನ್ ಬಯೊಟೆಕ್ನ ಔಷಧ ನೀಡಲಾಗಿದ್ದ ಉಜ್ಬೇಕಿಸ್ತಾನದ 18 ಮಕ್ಕಳು ಮೃತಪಟ್ಟ ಬಗ್ಗೆ ವಿವರಣೆ ನೀಡದೇ ಇದ್ದುದಕ್ಕೆ ಮಂಡಳಿಯು ಈ ಕ್ರಮ ತೆಗೆದುಕೊಂಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ವಿವರಣೆ ಕೋರಿ ಕಂಪನಿಗೆ ನೋಟಿಸ್ ನೀಡಲಾಗಿತ್ತು. ಆದರೆ ನೋಟಿಸ್ಗೆ ಉತ್ತರಿಸದ ಕಾರಣ ಕಂಪನಿತ ಸದಸ್ಯತ್ವ ವನ್ನು ಅಮಾನತು ಮಾಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.