ADVERTISEMENT

ಡೆಲ್ಟಾ ರೂಪಾಂತರ ತಳಿಯ ವಿರುದ್ಧ ಕೋವಿಡ್‌ ಲಸಿಕೆಗಳ ಪರಿಣಾಮ ಕ್ಷೀಣ: ತಜ್ಞರು

​ಪ್ರಜಾವಾಣಿ ವಾರ್ತೆ
Published 22 ಜೂನ್ 2021, 6:37 IST
Last Updated 22 ಜೂನ್ 2021, 6:37 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ನವದೆಹಲಿ: ಕೊರೊನಾ ವೈರಸ್‌ನ ಡೆಲ್ಟಾ ರೂಪಾಂತರದ ವಿರುದ್ಧ ಲಸಿಕೆಗಳ ಪರಿಣಾಮಕಾರಿತ್ವ ಕಡಿಮೆಯಾಗುತ್ತಿರುವುದನ್ನು ಗಮನಸಿರುವುದಾಗಿ ವಿಶ್ವ ಆರೋಗ್ಯ ಸಂಸ್ಥೆಯ ಸಾಂಕ್ರಾಮಿಕ ರೋಗಶಾಸ್ತ್ರಜ್ಞರೊಬ್ಬರು ಸೋಮವಾರ ಹೇಳಿದ್ದಾರೆ.

ಆದರೂ, ಕೋವಿಡ್‌ನಿಂದಾಗಿ ಗಂಭೀರಗೊಳ್ಳುವುದು ಮತ್ತು ಸಾವಿನ ಹಂತಕ್ಕೆ ಹೋಗುವುದನ್ನು ತಡೆಯುವಷ್ಟು ಸಾಮರ್ಥ್ಯವನ್ನು ಲಸಿಕೆಗಳು ಹೊಂದಿವೆ ಎಂದೂ ವಿಶ್ವಸಂಸ್ಥೆಯ ತಜ್ಞರು ಸ್ಪಷ್ಟಪಡಿಸಿದ್ದಾರೆ.

ಇದರ ಜೊತೆಗೇ, ಭವಿಷ್ಯದಲ್ಲಿ ರೂಪಾಂತರಿಗಳ ಸಮೂಹವೇ ಸೃಷ್ಟಿಯಾಗಬಹುದಾದ ಎಚ್ಚರಿಕೆಯನ್ನೂ ಸಾಂಕ್ರಾಮಿಕ ರೋಗ ಶಾಸ್ತ್ರಜ್ಞರು ನೀಡಿದ್ದಾರೆ. ಹೀಗಾಗಿ ಲಸಿಕೆಗಳು ಕೊರೊನಾ ವೈರಸ್‌ ವಿರುದ್ಧ ಹೋರಾಡುವ ಸಾಮರ್ಥ್ಯವನ್ನು ಕಳೆದುಕೊಳ್ಳುವ ಸಾಧ್ಯತೆಗಳಿವೆ ಎಂದು ಅವರು ಹೇಳಿದ್ದಾರೆ. ಈ ಬಗ್ಗೆ ಆಂಗ್ಲ ವೃತ್ತಪತ್ರಿಕೆ ಡೆಕ್ಕನ್‌ ಹೆರಾಲ್ಡ್‌ ವರದಿ ಮಾಡಿದೆ.

ADVERTISEMENT

ಡೆಲ್ಟಾ ತಳಿಯು ಆತಂಕಕಾರಿಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಮತ್ತು ಅಮೆರಿಕ ಘೋಷಣೆ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.