ADVERTISEMENT

ವಡೋದರಾ ಸೇತುವೆ ಕುಸಿತ ಪ್ರಕರಣ: ನಾಲ್ವರು ಎಂಜಿನಿಯರ್‌ಗಳ ಅಮಾನತು

ಪಿಟಿಐ
Published 10 ಜುಲೈ 2025, 16:21 IST
Last Updated 10 ಜುಲೈ 2025, 16:21 IST
ವಡೋದರಾ ಜಿಲ್ಲೆಯಲ್ಲಿ ನಾಲ್ಕು ದಶಕಗಳಷ್ಟು ಹಳೆಯದಾದ ‘ಗಂಭೀರ’ ಸೇತುವೆ ಬುಧವಾರ ಬೆಳಿಗ್ಗೆ ಕುಸಿಯಿತು. ಈ ವೇಳೆ ನದಿಯಲ್ಲಿ ಬಿದ್ದ ವಾಹನಗಳಲ್ಲಿದ್ದ ಜನರ ರಕ್ಷಣಾ ಕಾರ್ಯ ನಡೆಯಿತು  –ಎಪಿ/ಪಿಟಿಐ ಚಿತ್ರ
ವಡೋದರಾ ಜಿಲ್ಲೆಯಲ್ಲಿ ನಾಲ್ಕು ದಶಕಗಳಷ್ಟು ಹಳೆಯದಾದ ‘ಗಂಭೀರ’ ಸೇತುವೆ ಬುಧವಾರ ಬೆಳಿಗ್ಗೆ ಕುಸಿಯಿತು. ಈ ವೇಳೆ ನದಿಯಲ್ಲಿ ಬಿದ್ದ ವಾಹನಗಳಲ್ಲಿದ್ದ ಜನರ ರಕ್ಷಣಾ ಕಾರ್ಯ ನಡೆಯಿತು  –ಎಪಿ/ಪಿಟಿಐ ಚಿತ್ರ   

ಅಹಮದಾಬಾದ್: ಗುಜರಾತ್‌ನ ವಡೋದರಾ ಜಿಲ್ಲೆಯ ಪಾದರಾ ಬಳಿ ಬುಧವಾರ ಸಂಭವಿಸಿದ ಸೇತುವೆ ಕುಸಿತ ದುರಂತದಲ್ಲಿ 16 ಮಂದಿ ಮೃತಪಟ್ಟಿದ್ದು, ಕೆಲವರು ನಾಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಲೋಕೋಪಯೋಗಿ ಇಲಾಖೆಯ ನಾಲ್ವರು ಎಂಜಿನಿಯರ್‌ಗಳನ್ನು ಅಮಾನತುಗೊಳಿಸಿದ್ದಾರೆ.

ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಎನ್.ಎಂ. ನಾಯಕವಾಲಾ, ಉಪ ಕಾರ್ಯನಿರ್ವಾಹಕ ಎಂಜಿನಿಯರ್‌ಗಳಾದ ಯು.ಸಿ. ಪಟೇಲ್, ಆರ್‌.ಟಿ. ಪಟೇಲ್ ಹಾಗೂ ಸಹಾಯಕ ಎಂಜಿನಿಯರ್ ಜೆ.ವಿ. ಶಾ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಡೋದರಾ ಸೇತುವೆ ಕುಸಿತ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯದ ಇತರ ಸೇತುವೆಗಳನ್ನು ಪರಿಶೀಲನೆ ನಡೆಸುವಂತೆ ಭೂಪೇಂದ್ರ ಪಟೇಲ್ ಅವರು ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ADVERTISEMENT

ಮಹಿಸಾಗರ ನದಿಗೆ ಕಟ್ಟಲಾದ ‘ಗಂಭೀರ ಸೇತುವೆ’ ಕುಸಿದು ಸಂಚರಿಸುತ್ತಿದ್ದ ಹಲವು ವಾಹನಗಳು ನದಿಗೆ ಬಿದ್ದಿದ್ದವು. ಬುಧವಾರ ರಾತ್ರಿ ಹೊತ್ತಿಗೆ ಸಾವಿನ ಸಂಖ್ಯೆ 10ಕ್ಕೆ ತಲುಪಿತ್ತು. ಶೋಧ ಕಾರ್ಯದಲ್ಲಿ ಮೃತದೇಹಗಳು ಪತ್ತೆಯಾಗಿದ್ದರಿಂದ, ಸಾವಿನ ಸಂಖ್ಯೆ 16ಕ್ಕೆ ಏರಿದೆ.

ಬುಧವಾರ ಬೆಳಿಗ್ಗೆ 7.30ರ ಸುಮಾರಿಗೆ ಸೇತುವೆಯ 10ರಿಂದ 15 ಮೀಟರ್ ಉದ್ದದ ಸ್ಲಾಬ್ ಕುಸಿದ ಪರಿಣಾಮ, ಆ ಸಂದರ್ಭದಲ್ಲಿ ಸಾಗುತ್ತಿದ್ದ ವಾಹನಗಳು ನದಿಗೆ ಬಿದ್ದಿದ್ದವು. ಇದರಲ್ಲಿ ಎರಡು ಟ್ರಕ್, ಎರಡು ವ್ಯಾನ್, ಒಂದು ರಿಕ್ಷಾ, ಒಂದು ದ್ವಿಚಕ್ರ ವಾಹನ ನದಿಗೆ ಬಿದ್ದಿದ್ದವು. ಘಟನೆಯಲ್ಲಿ ಗಾಯಗೊಂಡ ಐವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವಡೋದರಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಆನಂದ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.