ಜಮ್ಮು: ಕಾಶ್ಮೀರದ ಕತ್ರಾದಲ್ಲಿರುವ ಮಾತಾ ವೈಷ್ಣೋದೇವಿ ಬಳಿ ಭೀಕರ ಭೂಕುಸಿತ ಉಂಟಾದ ಬೆನ್ನಲ್ಲೇ, ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.
ಕತ್ರಾದಲ್ಲಿ ಬುಧವಾರ ಭೂಕುಸಿತ ಉಂಟಾಗಿತ್ತು. ಹಲವರು ಗಾಯಗೊಂಡಿದ್ದರು. ಇದಾದ ಬಳಿಕ ಯಾತ್ರಿಕರನ್ನು ಹಿಂದಿರುಗುವಂತೆ ಅಧಿಕಾರಿಗಳು ಸೂಚನೆ ನೀಡಿದ್ದರು.
ಭೂಕುಸಿತದಿಂದ ಹೆದ್ದಾರಿ, ರೈಲು ಮಾರ್ಗಗಳು ಸಂಪೂರ್ಣವಾಗಿ ಜಲಾವೃತಗೊಂಡಿವೆ. ರೈಲು ಸಂಪರ್ಕಗಳನ್ನು ಕಡಿತಗೊಳಿಸಿದ್ದರಿಂದ ನೂರಾರು ಪ್ರಯಾಣಿಕರು ಜಮ್ಮು ರೈಲು ನಿಲ್ದಾಣದಲ್ಲಿ ಸಿಲುಕಿಕೊಂಡಿದ್ದಾರೆ.
‘ನಾವು ಎರಡು ದಿನಗಳಿಂದ ಕತ್ರಾದಲ್ಲೆ ಇದ್ದೀವಿ. ಅಗತ್ಯ ಸೌಕರ್ಯಗಳಿಲ್ಲದೇ ಪರದಾಡುತ್ತಿದ್ದೇವೆ’ ಎಂದು ಪ್ರಯಾಣಿಕರೊಬ್ಬರು ತಮ್ಮ ಅಳಲು ತೋಡಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.