ADVERTISEMENT

ಜಮ್ಮು: ಮಾತಾ ವೈಷ್ಣೋದೇವಿ ಯಾತ್ರೆ ಪುನರಾರಂಭ

ಪಿಟಿಐ
Published 17 ಸೆಪ್ಟೆಂಬರ್ 2025, 2:24 IST
Last Updated 17 ಸೆಪ್ಟೆಂಬರ್ 2025, 2:24 IST
   

ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿರುವ ಮಾತಾ ವೈಷ್ಣೋದೇವಿ ಯಾತ್ರೆ ಇಂದು (ಬುಧವಾರ) ಪುನರಾರಂಭವಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೂರಕವಾದ ಹವಾಮಾನ ಪರಿಸ್ಥಿತಿ ಇರುವುದರಿಂದ ಬೆಳಿಗ್ಗೆ 6 ಗಂಟೆಗೆ ಯಾತ್ರೆಯನ್ನು ಆರಂಭಿಸಲಾಗಿದೆ ಎಂದು ಮಾತಾ ವೈಷ್ಣೋದೇವಿ ದೇಗುಲ ಮಂಡಳಿ (SMVDSB) ಹೇಳಿದೆ.

ಆಗಸ್ಟ್ 26 ರಂದು ಸಂಭವಿಸಿದ ಭೂಕುಸಿತದಲ್ಲಿ 34 ಜನ ಮೃತಪಟ್ಟು, 20 ಮಂದಿ ಗಾಯಗೊಂಡಿದ್ದರು. ಬಳಿಕ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿತ್ತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.