ADVERTISEMENT

ಅಟಲ್ ಬಿಹಾರಿ ವಾಜಪೇಯಿ ಜನ್ಮ ವಾರ್ಷಿಕೋತ್ಸವ: ಪ್ರಧಾನಿ ಸೇರಿ ಗಣ್ಯರ ಗೌರವ ಸಮರ್ಪಣೆ

ಏಜೆನ್ಸೀಸ್
Published 25 ಡಿಸೆಂಬರ್ 2020, 5:32 IST
Last Updated 25 ಡಿಸೆಂಬರ್ 2020, 5:32 IST
ಅಟಲ್ ಬಿಹಾರಿ ವಾಜಪೇಯಿ ಅವರ 96ನೇ ಜನ್ಮ ವಾರ್ಷಿಕೋತ್ಸವದಂದು ಪುಪ್ಪ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಅಟಲ್ ಬಿಹಾರಿ ವಾಜಪೇಯಿ ಅವರ 96ನೇ ಜನ್ಮ ವಾರ್ಷಿಕೋತ್ಸವದಂದು ಪುಪ್ಪ ನಮನ ಸಲ್ಲಿಸಿದ ಪ್ರಧಾನಿ ಮೋದಿ   

ನವದೆಹಲಿ: ಮಾಜಿ ಪ್ರಧಾನಿ ಮತ್ತು ಬಿಜೆಪಿ ನಾಯಕ ಅಟಲ್ ಬಿಹಾರಿ ವಾಜಪೇಯಿ ಅವರ 96ನೇ ಜನ್ಮ ವಾರ್ಷಿಕೋತ್ಸವದಂದು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿಯವರು ಗೌರವ ಸಲ್ಲಿಸಿದರು.

ಈ ಕುರಿತು ಟ್ವೀಟ್ ಮಾಡಿರುವ ಅವರು, ವಾಜಪೇಯಿ ಅವರ ದೂರದೃಷ್ಟಿಯ ನಾಯಕತ್ವದಿಂದ ದೇಶವನ್ನು ಅಭೂತಪೂರ್ವ ಅಭಿವೃದ್ಧಿಯತ್ತ ಕೊಂಡೊಯ್ದಿದ್ದರು. ಬಲಿಷ್ಠ ಮತ್ತು ಸಮೃದ್ಧ ಭಾರತವನ್ನು ನಿರ್ಮಿಸಲು ಅವರು ಮಾಡಿದ ಪ್ರಯತ್ನಗಳು ಶಾಶ್ವತವಾಗಿ ನೆನಪಿನಲ್ಲಿ ಉಳಿಯುತ್ತವೆ ಎಂದು ತಿಳಿಸಿದ್ದಾರೆ.

ದೆಹಲಿಯ ಸದೈವ್ ಅಟಲ್‌ನಲ್ಲಿರುವ ವಾಜಪೇಯಿ ಸಮಾಧಿಗೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ ಕೋವಿಂದ್‌, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಪಿಯೂಶ್ ಗೋಯಲ್ ಸೇರಿದಂತೆ ಅನೇಕರು ಪುಷ್ಪನಮನ ಸಲ್ಲಿಸಿದ್ದಾರೆ.

ADVERTISEMENT

ಅಮಿತ್ ಶಾ ಟ್ವೀಟ್ ಮಾಡಿ, ತಮ್ಮ ವಿಚಾರಧಾರೆ ಮತ್ತು ಸಿದ್ಧಾಂತ ಆಧಾರಿತ ಆಡಳಿತದ ಮೂಲಕ ರಾಷ್ಟ್ರಕ್ಕಾಗಿ ತಮ್ಮ ಜೀವನವನ್ನೇ ಸಮರ್ಪಿಸಿ ಭಾರತದ ವಿಕಾಸ, ಬಡವರ ಕಲ್ಯಾಣ ಮತ್ತು ಉತ್ತಮ ಆಡಳಿತದ ಯುಗವನ್ನು ಪ್ರಾರಂಭಿಸಿದರು. ಅವರ ಜನ್ಮದಿನದಂದು ಅವರಿಗೆ ಗೌರವ ಅರ್ಪಿಸುತ್ತೇನೆ. ಅಟಲ್ ಜಿ ಅವರ ಕರ್ತವ್ಯ ಮತ್ತು ರಾಷ್ಟ್ರೀಯ ಸೇವೆ ಯಾವಾಗಲೂ ನಮಗೆ ಸ್ಫೂರ್ತಿಯಾಗಿರುತ್ತದೆ ಎಂದು ಹೇಳಿದ್ದಾರೆ.

ವಾಜಪೇಯಿ ಜನ್ಮದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಂದು 6 ರಾಜ್ಯಗಳ ರೈತರ ಜತೆ ಸಂವಾದ ನಡೆಸಲಿದ್ದಾರೆ. ಇದೇ ವೇಳೆ ಅವರು ನೂತನ ಕೃಷಿ ಕಾಯ್ದೆಯ ನೀತಿಗಳ ಬಗ್ಗೆ ರೈತರಿಗೆ ವಿವರಣೆ ನೀಡಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.