ADVERTISEMENT

ಬೆಂಗಳೂರು–ಎರ್ನಾಕುಲಂ ವಂದೇ ಭಾರತ್‌: ಪ್ರಧಾನಿ ಮೋದಿಯಿಂದ ಇಂದು ಹಸಿರು ನಿಶಾನೆ

ಪಿಟಿಐ
Published 7 ನವೆಂಬರ್ 2025, 23:30 IST
Last Updated 7 ನವೆಂಬರ್ 2025, 23:30 IST
   

ಕೊಚ್ಚಿ: ಬೆಂಗಳೂರು– ಎರ್ನಾಕುಲಂ ನಡುವೆ ವಂದೇ ಭಾರತ್ ರೈಲು ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಬೆಳಿಗ್ಗೆ 7 ಗಂಟೆಗೆ ವರ್ಚುವಲ್‌ ಆಗಿ ಹಸಿರು ನಿಶಾನೆ ತೋರಲಿದ್ದಾರೆ.

ಎರ್ನಾಕುಲಂ ಜಂಕ್ಷನ್‌ನಿಂದ ಆರಂಭವಾಗುವ ರೈಲಿನ ಸಂಚಾರವು ತ್ರಿಶ್ಶೂರ್, ಪಾಲಕ್ಕಾಡ್‌, ಕೊಯಮತ್ತೂರು, ತಿರುಪ್ಪೂರು, ಈರೋಡ್, ಸೇಲಂ, ಕೃಷ್ಣರಾಜಪುರಂ ನಿಲ್ದಾಣಗಳ ಮೂಲಕ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣ ತಲುಪಲಿದೆ.

ಕೇರಳ–ತಮಿಳುನಾಡು–ಕರ್ನಾಟಕದಲ್ಲಿ ಸಂಚರಿಸುವ ಈ ರೈಲು ಎಂಟು ಕೋಚ್‌ಗಳನ್ನು ಒಳಗೊಂಡಿರಲಿದೆ. ಕೇರಳದ ಮೂರನೇ ಹಾಗೂ ದಕ್ಷಿಣ ರೈಲ್ವೆಯ 12ನೇ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಇದಾಗಿದ್ದು, ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಉದ್ಯೋಗಿಗಳಿಗೆ, ಉದ್ಯಮಿಗಳು, ವಿದ್ಯಾರ್ಥಿಗಳಿಗೆ ಇದರಿಂದ ಅನುಕೂಲವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ಕೇರಳ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್‌, ಕೇಂದ್ರ ಸಚಿವರಾದ ಸುರೇಶ್‌ ಗೋಪಿ, ಜಾರ್ಜ್‌ ಕುರಿಯನ್, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ರಾಜೀವ್ ಚಂದ್ರಶೇಖರ್ ಅವರು ಎರ್ನಾಕುಲಂ ಜಂಕ್ಷನ್‌ನಲ್ಲಿ ನಡೆಯುವ ಸಮಾರಂಭದಲ್ಲಿ ಭಾಗಿಯಾಗಲಿದ್ದು, ಪ್ರಧಾನಿ ಅವರು ಬೆಳಿಗ್ಗೆ 7 ಗಂಟೆಗೆ ಆನ್‌ಲೈನ್‌ ಮೂಲಕ ಚಾಲನೆ ನೀಡುವರು ಎಂದು ದಕ್ಷಿಣ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.