ADVERTISEMENT

ನ. 10ರಿಂದ ಚೆನ್ನೈ–ಮೈಸೂರು ನಡುವೆ ವಂದೇ ಭಾರತ್ ರೈಲು

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2022, 16:31 IST
Last Updated 14 ಅಕ್ಟೋಬರ್ 2022, 16:31 IST

ನವದೆಹಲಿ: ಚೆನ್ನೈ–ಬೆಂಗಳೂರು–ಮೈಸೂರು ನಡುವೆ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ನವೆಂಬರ್‌ 10ರಿಂದ ಸಂಚಾರ ಆರಂಭಿಸಲಿದ್ದು, ಪ್ರಧಾನಿ ನರೇಂದ್ರ ಮೋದಿ ಇದಕ್ಕೆ ಚಾಲನೆ ನೀಡಲಿದ್ದಾರೆ.

ಈ ಮೂಲಕ ಮೊದಲ ಬಾರಿಗೆ ದಕ್ಷಿಣ ಭಾರತದಲ್ಲಿ ಈ ರೈಲು ಸಂಚರಿಸಲಿದೆ. ಇದು ಐದನೇ ವಂದೇ ಭಾರತ್‌ ರೈಲು ಆಗಿದೆ. ಚೆನ್ನೈ-ಬೆಂಗಳೂರು-ಮೈಸೂರು ವಂದೇ ಭಾರತ್ ಎಕ್ಸ್‌ಪ್ರೆಸ್ ಒಟ್ಟು 483 ಕಿ.ಮೀ. ದೂರವನ್ನು ಕ್ರಮಿಸಲಿದೆ. ‘ವಂದೇ ಭಾರತ್ 2.0’ ರೈಲುಗಳು, 'ಕವಚ' ಎಂಬ ರೈಲು ಡಿಕ್ಕಿ ತಪ್ಪಿಸುವ ವ್ಯವಸ್ಥೆ (ಟಿಸಿಎಎಸ್) ಸೇರಿದಂತೆ ಅತ್ಯಾಧುನಿಕ ಸುರಕ್ಷತಾ ವೈಶಿಷ್ಟ್ಯ ಗಳನ್ನು ಹೊಂದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT