ನಾಣ್ಯ, ಅಂಚೆಚೀಟಿ ಬಿಡುಗಡೆ ಮಾಡಿದ PM ಮೋದಿ
ನವದೆಹಲಿ: ‘ವಂದೇ ಮಾತರಂ’ ಗೀತೆಗೆ 150 ವರ್ಷ ತುಂಬಿದ ಕಾರಣ ದೇಶದಾದ್ಯಂತ ಒಂದು ವರ್ಷದವರೆಗೆ ನಿರಂತರ ಕಾರ್ಯಕ್ರಮಗಳು ನಡೆಯಲಿವೆ. ಈ ಕಾರ್ಯಕ್ರಮಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಚಾಲನೆ ನೀಡಿದರು.
ಇಂದಿರಾಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ವಂದೇ ಮಾತರಂ’ ಗೀತೆಯ ಸಮೂಹ ಗಾಯನಕ್ಕೆ ಮೋದಿ ಸೇರಿದಂತೆ ನೆರೆದ ಹಲವರು ಕಿವಿಯಾದರು.
ಇದೇ ಸಂದರ್ಭದಲ್ಲಿ ವಂದೇ ಮಾತರಂ 150ರ ಸ್ಮರಣಾರ್ಥ ಅಂಚೆಚೀಟಿ ಮತ್ತು ನಾಣ್ಯವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಿದರು. ಜತೆಗೆ ‘ವಂದೇ ಮಾತರಂ150.ಇನ್’ ವೆಬ್ ಪೋರ್ಟಲ್ ಅನ್ನೂ ಅನಾವರಣಗೊಳಿಸಿದರು. ಈ ಪೋರ್ಟಲ್‌ನಲ್ಲಿ ವಂದೇ ಮಾತರಂ ಗೀತೆಯನ್ನು ಹಾಡಿದ ವಿಡಿಯೊ ಲಗತ್ತಿಸಿ ಪ್ರಮಾಣಪತ್ರ ಪಡೆಯಬಹುದಾಗಿದೆ.
ಬಂಗಾಳದ ಕವಿ ಬಂಕಿಮಚಂದ್ರ ಚಟರ್ಜಿ ರಚಿಸಿರುವ ವಂದೇ ಮಾತರಂ ಗೀತೆಯ 150 ವರ್ಷದ ಸಂಭ್ರಮಾಚರಣೆ 2026ರ ನ.7ರವರೆಗೂ ಇರಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.