
ಪಿಟಿಐ
ಪ್ರಧಾನಿ ನರೇಂದ್ರ ಮೋದಿ
ಪಿಟಿಐ ಚಿತ್ರ
ನವದೆಹಲಿ: ‘ವಂದೇ ಮಾತರಂ’ ಗೀತೆಗೆ 150 ವರ್ಷ ತುಂಬಿದ ಕಾರಣ ದೇಶದಾದ್ಯಂತ ಒಂದು ವರ್ಷದವರೆಗೆ ನಿರಂತರ ಕಾರ್ಯಕ್ರಮಗಳು ನಡೆಯಲಿವೆ. ಈ ಕಾರ್ಯಕ್ರಮಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಚಾಲನೆ ನೀಡಲಿದ್ದಾರೆ.
ಇದೇ ವೇಳೆ ಅಂಚೆ ಚೀಟಿ ಮತ್ತು ನಾಣ್ಯವನ್ನೂ ಪ್ರಧಾನಿ ಬಿಡುಗಡೆ ಮಾಡುವರು. ಕಾರ್ಯಕ್ರಮವು ಇಲ್ಲಿನ ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ. 2025ರ ನ.7ರಿಂದ 2026ರ ನ.7ವರೆಗೆ ಕಾರ್ಯಕ್ರಮಗಳು ನಡೆಯಲಿವೆ.
‘ಬೆಳಿಗ್ಗೆ 9.50ಕ್ಕೆ ‘ವಂದೇ ಮಾತರಂ’ ಗೀತೆಯ ಸಮೂಹ ಗಾಯನ ಕಾರ್ಯಕ್ರಮವೂ ನಡೆಯಲಿದೆ. ಸಮಾಜದ ಎಲ್ಲ ವರ್ಗದ ಜನರು ಈ ಗಾಯನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ’ ಎಂದು ಪ್ರಧಾನಮಂತ್ರಿ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.