ADVERTISEMENT

‘ವಂದೇ ಮಾತರಂ’: ಲೋಕಸಭೆಯಲ್ಲಿ ಮೋದಿ ಮಾತು

ಪಿಟಿಐ
Published 7 ಡಿಸೆಂಬರ್ 2025, 15:51 IST
Last Updated 7 ಡಿಸೆಂಬರ್ 2025, 15:51 IST
ನರೇಂದ್ರ ಮೋದಿ
ನರೇಂದ್ರ ಮೋದಿ   

ನವದೆಹಲಿ: ‘ವಂದೇ ಮಾತರಂ’ ಗೀತೆಯ 150ನೇ ವಾರ್ಷಿಕೋತ್ಸವ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಮೊದಲಿಗೆ ಲೋಕಸಭೆಯಲ್ಲಿ ಸೋಮವಾರ ಮಾತನಾಡಲಿದ್ದಾರೆ.

‘ಚರ್ಚೆಯಿಂದ ಗೀತೆಯ ಕುರಿತ ಮಹತ್ವದ ಮತ್ತು ಕೆಲವು ಗೊತ್ತಿಲ್ಲದ ಮಾಹಿತಿ ಲಭ್ಯವಾಗುವ ನಿರೀಕ್ಷೆ ಇದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಲೋಕಸಭೆಯಲ್ಲಿ  ‘ವಂದೇ ಮಾತರಂ’ ಕುರಿತ ಚರ್ಚೆಗೆ 10 ತಾಸು ಮೀಸಲಿಡಲಾಗಿದೆ.

ADVERTISEMENT

ಈ ವಿಚಾರದ ಕುರಿತು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಕಾಂಗ್ರೆಸ್‌ ನಾಯಕರಾದ ಗೌರವ್‌ ಗೊಗೊಯ್‌ ಮತ್ತು ಪ್ರಿಯಾಂಕಾ ಗಾಂಧಿ ಮತ್ತಿತರರು ಮಾತನಾಡುವ ಸಾಧ್ಯತೆ ಇದೆ.

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು, ‘ವಂದೇ ಮಾತರಂ’ ಗೀತೆಯ ಕೆಲ ಪ್ರಮುಖ ಸಾಲುಗಳನ್ನು 1937ರಲ್ಲಿ ಕಾಂಗ್ರೆಸ್‌ ಕೈಬಿಟ್ಟಿದೆ. ಇದು ದೇಶ ವಿಭಜನೆಯ ಬೀಜ ಬಿತ್ತಲು ಕಾರಣವಾಯಿತು’ ಎಂದು ಆರೋಪಿಸಿದ್ದರು.

ರಾಜ್ಯಸಭೆಯಲ್ಲಿ ಮಂಗಳವಾರ ಗೃಹ ಸಚಿವ ಅಮಿತ್‌ ಶಾ ಅವರು ಈ ವಿಷಯದ ಕುರಿತು ಮೊದಲಿಗೆ ಮಾತನಾಡಲಿದ್ದಾರೆ. ನಂತರ ಸಚಿವ ಜೆ.ಪಿ.ನಡ್ಡಾ ಅವರು ಮಾತನಾಡಲಿದ್ದಾರೆ.

‘ವಂದೇ ಮಾತರಂ’ ಗೀತೆ ಕುರಿತ ಚರ್ಚೆ ಬಳಿಕ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಕುರಿತು ಚರ್ಚೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.