ಸಾಂದರ್ಭಿಕ ಚಿತ್ರ
ಲಖನೌ: ಉತ್ತರ ಪ್ರದೇಶದ ವಾರಣಾಸಿ ಜಿಲ್ಲೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ವಾರಣಾಸಿಯ ಲಚ್ಚಿರಾಂಪುರ ಗ್ರಾಮದ ಅಂಬೇಡ್ಕರ್ ಪ್ರತಿಮೆಗೆ ಕಿಡಿಗೇಡಿಗಳು ಸೋಮವಾರ ತಡರಾತ್ರಿ ಹಾನಿ ಮಾಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಘಟನೆ ಬಗ್ಗೆ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.