ADVERTISEMENT

ಬೆಂಗಳೂರಿನಿಂದ ವಾರಾಣಸಿಗೆ ಹೊರಟಿದ್ದ ವಿಮಾನ ತೆಲಂಗಾಣದಲ್ಲಿ ತುರ್ತು ಭೂಸ್ಪರ್ಶ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಏಪ್ರಿಲ್ 2023, 5:17 IST
Last Updated 4 ಏಪ್ರಿಲ್ 2023, 5:17 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ನವದೆಹಲಿ: ವಾರಾಣಸಿಗೆ ಹೊರಟಿದ್ದ ಇಂಡಿಗೋ ವಿಮಾನವು ತಾಂತ್ರಿಕ ಸಮಸ್ಯೆಯಿಂದಾಗಿ ಮಂಗಳವಾರ ತೆಲಂಗಾಣದ ಶಂಶಾಬಾದ್‌ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಆರ್‌ಜಿಐಎ) ತುರ್ತು ಭೂಸ್ಪರ್ಶ ಮಾಡಿದೆ.

137 ಪ್ರಯಾಣಿಕರನ್ನು ಹೊತ್ತು ಬೆಂಗಳೂರಿನಿಂದ ವಾರಾಣಸಿಗೆ ಹೊರಟಿದ್ದ ಇಂಡಿಗೋ 6E897 ವಿಮಾನ ಶಂಶದಾಬಾದ್ ವಿಮಾನ ನಿಲ್ದಾಣದಲ್ಲಿ ಬೆಳಿಗ್ಗೆ 6:15ರ ವೇಳೆ ತುರ್ತು ಭೂಸ್ಪರ್ಶ ಮಾಡಿತು ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ದೃಢಪಡಿಸಿದೆ.

‘ತಾಂತ್ರಿಕ ಸಮಸ್ಯೆಯ ಕಾರಣಕ್ಕೆ ವಿಮಾನವನ್ನು ತುರ್ತಾಗಿ ಇಳಿಸಲಾಯಿತು. ವಿಮಾನದಲ್ಲಿದ್ದ ಎಲ್ಲರೂ ಸುರಕ್ಷಿತವಾಗಿದ್ದಾರೆ‘ ಎಂದು ಡಿಜಿಸಿಎ ತಿಳಿಸಿದೆ.

ADVERTISEMENT

ಘಟನೆಯ ಕುರಿತ ತನಿಖೆಗೆ ಡಿಜಿಸಿಎ ಆದೇಶಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.