ವಾರಾಣಸಿ: ಜ್ಞಾನವಾಪಿ ಮಸೀದಿ ಆವರಣದ ವೈಜ್ಞಾನಿಕ ಸಮೀಕ್ಷೆಯನ್ನು ಪೂರ್ಣಗೊಳಿಸಿ, ವರದಿ ಸಲ್ಲಿಸಲು ಭಾರತೀಯ ಪುರಾತತ್ವ ಇಲಾಖೆಗೆ ವಾರಾಣಸಿ ಜಿಲ್ಲಾ ನ್ಯಾಯಾಲಯವು 10 ದಿನಗಳ ಹೆಚ್ಚುವರಿ ಕಾಲಾವಕಾಶ ನೀಡಿದೆ.
ಇಲಾಖೆಯು ಮೂರು ವಾರಗಳ ಹೆಚ್ಚುವರಿ ಕಾಲಾವಕಾಶ ಕೋರಿತ್ತು ಎಂದು ಹಿಂದೂಗಳ ಪರ ವಕೀಲ ಮದನ್ ಮೋಹನ್ ಯಾದವ್ ತಿಳಿಸಿದ್ದಾರೆ. ಮುಂದಿನ ವಿಚಾರಣೆಯನ್ನು ಡಿಸೆಂಬರ್ 11ಕ್ಕೆ ನಿಗದಿ ಮಾಡಲಾಗಿದೆ.
ಇಲಾಖೆಯು ಹೆಚ್ಚುವರಿ ಕಾಲಾವಕಾಶ ಕೋರಿದ್ದನ್ನು ಮುಸ್ಲಿಮರ ಪರ ವಕೀಲ ಮೊಹಮ್ಮದ್ ಇಖ್ಲಾಕ್ ಅವರು ಬಲವಾಗಿ ವಿರೋಧಿಸಿದರು. ಸೂಕ್ತವಾದ ಯಾವ ಕಾರಣವೂ ಇಲ್ಲದೆ ಇಲಾಖೆಯು ಹೆಚ್ಚಿನ ಸಮಯ ಕೇಳುತ್ತಿದೆ ಎಂದು ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.