ಪಾರ್ಕಿಂಗ್ ಜಗಳ ಶಿಕ್ಷಕ ಸಾವು
ವಾರಾಣಸಿ: ವಾಹನ ನಿಲುಗಡೆಗಾಗಿ ಉತ್ತರ ಪ್ರದೇಶದ ವಾರಾಣಸಿಯಲ್ಲಿ ಶಿಕ್ಷಕರೊಬ್ಬರೊಂದಿಗೆ ವಾಗ್ವಾದ ನಡೆಸಿದ ಮೂವರು ಅವರನ್ನು ಕೊಲೆ ಮಾಡಿದ್ದಾರೆ.
ಕೊಲೆಯಾದ ಪ್ರವೀಣ್ ಜಾ (48) ಅವರು ಪ್ರತಿಷ್ಠಿತ ಖಾಸಗಿ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು. ಕೊಲೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
‘ಗುರುವಾರ ರಾತ್ರಿ ಪಾರ್ಕಿಂಗ್ ಸ್ಥಳಕ್ಕಾಗಿ ಪ್ರವೀಣ್ ಮತ್ತು ಆದರ್ಶ ಸಿಂಗ್ ಎಂಬುವವರ ನಡುವೆ ಜಗಳ ನಡೆದಿದೆ. ಇದು ವಿಕೋಪಕ್ಕೆ ತಿರುಗಿದ ಪರಿಣಾಮ ಆದರ್ಶ್ ಅವರೊಂದಿಗೆ ಸೇರಿಕೊಂಡ ಇಬ್ಬರು ಪ್ರವೀಣ್ ಮೇಲೆ ಇಟ್ಟಿಗೆ ಮತ್ತು ಕಬ್ಬಿಣದ ಸರಳಿನಿಂದ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಪ್ರವೀಣ್ ಅವರನ್ನು ಆಸ್ಪತ್ರೆ ದಾಖಲಿಸಲಾಯಿತು. ಆದರೆ ಅವರು ಅದಾಗಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ’ ಎಂದು ಡಿವೈಎಸ್‌ಪಿ ಟಿ. ಸರವಣನ್ ತಿಳಿಸಿದ್ದಾರೆ.
ಪ್ರವೀಣ್ ಅವರ ಕುಟುಂಬದವರ ದೂರಿನ ಆಧಾರದಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.