ADVERTISEMENT

ನಿರುದ್ಯೋಗ, ಭ್ರಷ್ಟಾಚಾರ ಕೊನೆಯಾಗುವವರೆಗೂ ಹೋರಾಟ ಮುಂದುವರಿಯಲಿದೆ: ವರುಣ್‌ ಗಾಂಧಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 22 ಆಗಸ್ಟ್ 2022, 8:27 IST
Last Updated 22 ಆಗಸ್ಟ್ 2022, 8:27 IST
ವರುಣ್‌ ಗಾಂಧಿ
ವರುಣ್‌ ಗಾಂಧಿ   

ನವದೆಹಲಿ: ನಿರುದ್ಯೋಗ, ಭ್ರಷ್ಟಾಚಾರ ಮತ್ತು ಹಣದುಬ್ಬರವು ಅಂತ್ಯವಾಗುವವರೆಗೂ ನನ್ನ ಹೋರಾಟ ಮುಂದುವರಿಯಲಿದೆ ಎಂದು ಬಿಜೆಪಿ ಸಂಸದ ವರುಣ್ ಗಾಂಧಿ ಭಾನುವಾರ ಹೇಳಿದ್ದಾರೆ.

ಮಕ್ಕಳು ಮತ್ತು ಯುವಕರಿಗೆ ಗೌರವ ಸಿಗಬೇಕು. ಅವರು ಸಹಾಯಕ್ಕಾಗಿ ಯಾರ ಮುಂದೆಯೂ ತಲೆಬಾಗಬಾರದು. ಅಂತಹ ಭಾರತಕ್ಕಾಗಿ ತಾನು ಕೆಲಸ ಮಾಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ನಡೆದ ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡಿರುವ ಅವರು, ನಿಮ್ಮ ಮಕ್ಕಳಿಗೆ ಕೆಲಸ ಸಿಗುವವರೆಗೂ, ನನ್ನ ‘ಸಂಘರ್ಷ’ ಮುಂದುವರಿಯಲಿದೆ. ಭ್ರಷ್ಟಾಚಾರದ ವಿರುದ್ಧವೂ ನನ್ನ ಹೋರಾಟ ನಿರಂತರವಾಗಿ ಇರಲಿದೆ’ ಎಂದು ಹೇಳಿದ್ದಾರೆ.

ADVERTISEMENT

‘ನಮ್ಮ ಪೂರ್ವಜರ ತ್ಯಾಗವನ್ನು ವ್ಯರ್ಥವಾಗಲು ನಾವು ಬಿಡುವುದಿಲ್ಲ. ಜನರು ಮೂಲಭೂತ ಸಮಸ್ಯೆಗಳು, ಅನ್ಯಾಯ ಮತ್ತು ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತುವ ಸಮಯ ಬಂದಿದೆ’ ಎಂದು ತಮ್ಮದೇ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.