ADVERTISEMENT

ಎಂಎಸ್‌ಪಿಯನ್ನು ಕಾನೂನು ವ್ಯಾಪ್ತಿಗೆ ತರಲು ವರುಣ್ ಗಾಂಧಿ ಒತ್ತಾಯ

ಪಿಟಿಐ
Published 29 ಅಕ್ಟೋಬರ್ 2021, 11:00 IST
Last Updated 29 ಅಕ್ಟೋಬರ್ 2021, 11:00 IST
ವರುಣ್ ಗಾಂಧಿ
ವರುಣ್ ಗಾಂಧಿ   

ನವದೆಹಲಿ: ರೈತರ ಸಮಸ್ಯೆಗಳ ಕುರಿತು ಉತ್ತರ ಪ್ರದೇಶ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದ ವರುಣ್ ಗಾಂಧಿ, ‘ಬೆಳೆ ಖರೀದಿ ಕೇಂದ್ರಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಸಂಪೂರ್ಣವಾಗಿ ಬಹಿರಂಗವಾಗಿದ್ದು, ಕೇಂದ್ರದಲ್ಲಿರುವವರು ರೈತರಿಗೆ ಧಾನ್ಯಗಳನ್ನು ಮಧ್ಯವರ್ತಿಗಳಿಗೆ ಮಾರಾಟ ಮಾಡುವಂತೆ ಬಲವಂತ ಮಾಡುತ್ತಿದ್ದಾರೆ’ ಎಂದು ಟೀಕಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ‘ಮೂರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಗಳ ಬೇಡಿಕೆಗಳಲ್ಲಿ ಒಂದಾದ ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕಾನೂನು ಖಾತರಿಯನ್ನು ನೀಡುವಂತೆ ವರುಣ್ ಗಾಂಧಿ ಒತ್ತಾಯಿಸಿದ್ದಾರೆ. ‘ಎಂಎಸ್‌ಪಿಯನ್ನು ಕಾನೂನು ವ್ಯಾಪ್ತಿಗೆ ತರದಿದ್ದರೆ, 'ಮಂಡಿ'ಗಳಲ್ಲಿ (ಕೃಷಿ ಉತ್ಪನ್ನಗಳ ಮಾರುಕಟ್ಟೆ) ರೈತರ ಶೋಷಣೆ ಮುಂದುವರಿಯುತ್ತದೆ‘ ಎಂದು ಅವರು ಹೇಳಿದ್ದಾರೆ.

ಇದೇ ವೇಳೆ ತಮ್ಮ ಟ್ವೀಟ್‌ ಜೊತೆಗೆ, ಬರೇಲಿಯ ಮಂಡಿಯಲ್ಲಿ ಸರ್ಕಾರಿ ಅಧಿಕಾರಿಯೊಂದಿಗೆ ಮಾತನಾಡುತ್ತಿರುವ ವೀಡಿಯೊವನ್ನು ಅವರು ಪೋಸ್ಟ್ ಮಾಡಿದ್ದಾರೆ. ಇದು ರಾಜ್ಯ ಸರ್ಕಾರಕ್ಕೆ ದೊಡ್ಡ ನಾಚಿಕೆಗೇಡಿನ ವಿಷಯ ಎಂಬುದಾಗಿ ಜನರು ಮಾತನಾಡಿಕೊಳ್ಳುತ್ತಿರುವುದಾಗಿ ಅವರು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.