ADVERTISEMENT

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಬೆಂಗಾವಲು ವಾಹನಗಳ ಅಪಘಾತ

ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ

ಪಿಟಿಐ
Published 4 ಫೆಬ್ರುವರಿ 2021, 7:19 IST
Last Updated 4 ಫೆಬ್ರುವರಿ 2021, 7:19 IST
ದೆಹಲಿಯಲ್ಲಿ ಗಣರಾಜ್ಯೋತ್ಸವ ದಿನದಂದು ನಡೆದ ರೈತರ ರ್‍ಯಾಲಿವೇಳೆ ಮೃತಪಟ್ಟ ಯುವ ನವ್ರೀತ್ ಸಿಂಗ್ ಅವರ ಕುಟುಂಬದವರನ್ನು ಭೇಟಿಯಾಗಲು ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಬುಧವಾರ ಉತ್ತರ ಪ್ರದೇಶದ ಹಾಪುರ್ ಜಿಲ್ಲೆ ರಾಮ್‌ಪುರಕ್ಕೆ ತೆರೆಳಿದರು.
ದೆಹಲಿಯಲ್ಲಿ ಗಣರಾಜ್ಯೋತ್ಸವ ದಿನದಂದು ನಡೆದ ರೈತರ ರ್‍ಯಾಲಿವೇಳೆ ಮೃತಪಟ್ಟ ಯುವ ನವ್ರೀತ್ ಸಿಂಗ್ ಅವರ ಕುಟುಂಬದವರನ್ನು ಭೇಟಿಯಾಗಲು ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಬುಧವಾರ ಉತ್ತರ ಪ್ರದೇಶದ ಹಾಪುರ್ ಜಿಲ್ಲೆ ರಾಮ್‌ಪುರಕ್ಕೆ ತೆರೆಳಿದರು.   

ಹಾಪುರ (ಉತ್ತರ ಪ್ರದೇಶ): ಪಶ್ಚಿಮ ಉತ್ತರ ಪ್ರದೇಶದ ಹಾಪುರ ಜಿಲ್ಲೆಯಲ್ಲಿ ಗುರುವಾರ ಬೆಳಿಗ್ಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯವರ ಬೆಂಗಾವಲು ಪಡೆಯ ನಾಲ್ಕು ವಾಹನಗಳು ಅಪಘಾತಕ್ಕೀಡಾಗಿವೆ.

ನವದೆಹಲಿಯಲ್ಲಿ ಗಣರಾಜ್ಯೋತ್ಸವ ದಿನದಂದು ನಡೆದ ರೈತರ ಪ್ರತಿಭಟನೆ ವೇಳೆ ಮೃತಪಟ್ಟಿದ್ದ ಯುವಕ ನವ್ರೀತ್ ಸಿಂಗ್ ಅವರ ಕುಟುಂಬದವರನ್ನು ಭೇಟಿಯಾಗಲು ಪ್ರಿಯಾಂಕಾ ಅವರು ಹಾಪುರ ಜಿಲ್ಲೆಯ ರಾಮಪುರಕ್ಕೆ ಹೋಗುತ್ತಿದ್ದರು. ಇವರೊಂದಿಗೆ ಕಾರಿನಲ್ಲಿ ಉತ್ತರ ಪ್ರದೇಶ ಕಾಂಗ್ರೆಸ್‌ ರಾಜ್ಯ ಘಟಕದ ಮುಖಂಡ ಅಜಯ್‌ ಕುಮಾರ್‌ ಲಲ್ಲು ಇದ್ದರು.

ಹಾಪುರ ಜಿಲ್ಲೆಯ ಗಢ ಮುಕ್ತೇಶ್ವರ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ. ಆದರೆ, ಘಟನೆಯಲ್ಲಿ ಯಾವುದೇ ಸಾವು ನೋವು ಉಂಟಾಗಿಲ್ಲ.

ADVERTISEMENT

ಎಸ್‌ಯುವಿ ಸೇರಿದಂತೆ ನಾಲ್ಕು ವಾಹನಗಳು ಪ್ರಿಯಾಂಕಾ ಅವರನ್ನು ಹಿಂಬಾಲಿಸುತ್ತಿದ್ದವು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಆಗಿರುವ ವಿಡಿಯೊಗಳಿಂದ ತಿಳಿದುಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.