ADVERTISEMENT

ಪತ್ರಕರ್ತ ತೇಜ್‌ಪಾಲ್‌ ವಿರುದ್ಧದ ಅತ್ಯಾಚಾರ ಪ್ರಕರಣದ ತೀರ್ಪು ಇಂದು ಪ್ರಕಟ

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2021, 3:58 IST
Last Updated 27 ಏಪ್ರಿಲ್ 2021, 3:58 IST
 ತೇಜ್‌ಪಾಲ್‌
ತೇಜ್‌ಪಾಲ್‌   

ಪಣಜಿ: ‘ತೆಹೆಲ್ಕಾ’ಮಾಜಿ ಪ್ರಧಾನ ಸಂಪಾದಕ ತರುಣ್‌ ತೇಜ್‌ಪಾಲ್‌ ವಿರುದ್ಧದ ಅತ್ಯಾಚಾರ ಪ್ರಕರಣದ ತೀರ್ಪನ್ನು ಗೋವಾ ಸೆಷನ್ಸ್ ನ್ಯಾಯಾಲಯ ಮಂಗಳವಾರ ಪ್ರಕಟಿಸಲಿದೆ.

2013ರಲ್ಲಿ ಮಹಿಳಾ ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿ, ಅತ್ಯಾಚಾರ ಎಸಗಿರುವ ದೂರು ತೇಜ್‌ಪಾಲ್‌ ವಿರುದ್ಧ ದಾಖಲಾಗಿತ್ತು.

ಪ್ರಕರಣದ ವಿಚಾರಣೆ ಕಳೆದ ಮಾರ್ಚ್‌ನಲ್ಲಿ ಮುಕ್ತಾಯಗೊಂಡಿದ್ದು, ತೀರ್ಪನ್ನು ಏಪ್ರಿಲ್‌ 27ಕ್ಕೆ ಪ್ರಕಟಿಸುವುದಾಗಿ ನ್ಯಾಯಾಲಯ ತಿಳಿಸಿತ್ತು. ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಕ್ಷಮಾ ಜೋಶಿ ಅವರು ಇಂದು ತೀರ್ಪು ನೀಡುವರು.

ADVERTISEMENT

ಏನಿದು ಪ್ರಕರಣ?

ತೆಹಲ್ಕಾದ ಸಂಸ್ಥಾಪಕ -ಸಂಪಾದಕ ತರುಣ್ ತೇಜ್‌ಪಾಲ್ 2013ರಲ್ಲಿ ಥಿಂಕ್ ಫೆಸ್ಟ್ ಕಾರ್ಯಕ್ರಮದ ವೇಳೆ ಲೈಂಗಿಕ ದೌರ್ಜನ್ಯವೆಸಗಿದ್ದರು ಎಂದು ಅದೇ ಸಂಸ್ಥೆಯ ಕಿರಿಯ ಸಹೋದ್ಯೋಗಿಯೊಬ್ಬರು ಆರೋಪಿಸಿದ್ದರು. ಪಂಚತಾರಾ ಹೋಟೆಲ್‌ನ ಲಿಫ್ಟ್‌ನಲ್ಲಿ 52ರ ಹರೆಯದ ತರುಣ್ ಲೈಂಗಿಕ ದೌರ್ಜನ್ಯವೆಸಗಿದ್ದರು ಎಂದು ಸಂತ್ರಸ್ತೆ ದೂರು ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.