ADVERTISEMENT

ಡಿಎಂಕೆಗೆ ಮತ್ತೆ ಅಧಿಕಾರ: ಸ್ಟಾಲಿನ್‌ ವಿಶ್ವಾಸ

ಪಿಟಿಐ
Published 29 ಏಪ್ರಿಲ್ 2025, 13:12 IST
Last Updated 29 ಏಪ್ರಿಲ್ 2025, 13:12 IST
ಎಂ.ಕೆ.ಸ್ಟಾಲಿನ್–ಪಿಟಿಐ ಚಿತ್ರ
ಎಂ.ಕೆ.ಸ್ಟಾಲಿನ್–ಪಿಟಿಐ ಚಿತ್ರ   

ಚೆನ್ನೈ: ‘ಮುಂದಿನ ವರ್ಷ ನಡೆಯುವ ಚುನಾವಣೆಯಲ್ಲಿ ಡಿಎಂಕೆ ಮತ್ತೆ ಅಧಿಕಾರ ಹಿಡಿಯಲಿದೆ’ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ವಿಶ್ವಾಸ ವ್ಯಕ್ತಪಡಿಸಿದರು.

ಅಧಿವೇಶನದಲ್ಲಿ ಗೃಹ ಇಲಾಖೆ ಮೇಲಿನ ಚರ್ಚೆ ವೇಳೆ ಮಾತನಾಡಿದ ಅವರು, ‘ಕಳೆದ 4 ವರ್ಷಗಳ ಡಿಎಂಕೆ ಆಡಳಿತದಲ್ಲಿ ರಾಜ್ಯ ಹಲವು ಕ್ಷೇತ್ರಗಳಲ್ಲಿ ಮೇಲುಗೈ ಸಾಧಿಸಿದೆ’ ಎಂದು ತಿಳಿಸಿದರು.

‘ರಾಜ್ಯದಲ್ಲಿನ ಬೆಳವಣಿಗೆ ದರ ಶೇ 9.69ರಷ್ಟು ಇದ್ದು ದೇಶದಲ್ಲಿಯೇ ಮೊದಲ ಸ್ಥಾನದಲ್ಲಿದೆ. ಕೇಂದ್ರ ಸರ್ಕಾರದ ಅಂಕಿಅಂಶಗಳು ಕೂಡ ಇದನ್ನು ಖಚಿತಪಡಿಸಿವೆ’ ಎಂದು ಹೇಳಿದರು. 

ADVERTISEMENT

‘ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಯಾವುದೇ ಮಕ್ಕಳು ಅರ್ಧದಲ್ಲಿ ಶಾಲೆ ತೊರೆದಿಲ್ಲ. ಬಡತನವನ್ನು ನಿರ್ಮೂಲನೆ ಮಾಡಿದ್ದು, ಉನ್ನತ ಶಿಕ್ಷಣ ಪಡೆಯುವ ಸಂಖ್ಯೆಯಲ್ಲಿ ಏರುಗತಿಯಲ್ಲಿದೆ. ರಾಜ್ಯದಲ್ಲಿ ಕಾನೂನು ಹಾಗೂ ಸುವ್ಯವಸ್ಥೆಯನ್ನು ಯಶಸ್ವಿಯಾಗಿ ಕಾಪಾಡಿಕೊಂಡು ಬರಲಾಗಿದೆ’ ಎಂದು ತಿಳಿಸಿದರು.

‘ಡಿಎಂಕೆ ಸರ್ಕಾರವು ಜಾರಿಗೊಳಿಸಿದ ಹಲವು ಕಲ್ಯಾಣ ಯೋಜನೆಗಳು ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜನರು ಮೆಚ್ಚಿಕೊಂಡಿದ್ದು, ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರ ಹಿಡಿಯಲು ಜನರು ಆಶೀರ್ವದಿಸಲಿದ್ದಾರೆ. ದ್ರಾವಿಡ ಮಾದರಿ ಸರ್ಕಾರದ ಮೊದಲ ಅವಧಿಗೆ ಜನರು ಸಾಕ್ಷಿಯಾಗಿದ್ದಾರೆ. 2026ರ 2ನೇ ಅವಧಿಗೂ ಸಿದ್ಧವಾಗುತ್ತಿದ್ದೇವೆ’ ಎಂದು ಸ್ಟಾಲಿನ್‌ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.